Toll Free No: 1800-425-0889

Home | Contact

Press Note

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು 3
ಇದರ ಅಧ್ಯಕ್ಷರಾದ
ಡಾ|| ಎಂ. ಎನ್. ರಾಜೇಂದ್ರ ಕುಮಾರ್ ಏರ್ಪಡಿಸಿದ ಪತ್ರಿಕಾಗೋಷ್ಠಿ

ಅಭಿವೃದ್ಧಿಯ ಮುಂಚೂಣಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ದೇಶಕ್ಕೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ ಶಾಖೆಗಳ ಮೂಲಕ ನೀಡುತ್ತಿರುವ ನಮ್ಮ ಬ್ಯಾಂಕ್ ‘ಜನಸಾಮಾನ್ಯರ ಬ್ಯಾಂಕ್‘ ಆಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರ.

28.63 ಕೋಟಿ ರೂಪಾಯಿ ದಾಖಲೆಯ ಲಾಭಗಳಿಕೆ

104 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ನಮ್ಮ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದಿದೆ. ದಿನಾಂಕ 31-03-2018ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ 28.63 ಕೋಟಿ ರೂಪಾಯಿ ಲಾಭ ಗಳಿಸಿದ್ದು, ಇದು ಬ್ಯಾಂಕಿನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ. 2017ರಲ್ಲಿ ಬ್ಯಾಂಕ್ ರೂ. 24.07 ಕೋಟಿ ಲಾಭ ಗಳಿಸಿದ್ದು, ಈ ಬಾರಿ ಲಾಭ ಗಳಿಕೆಯಲ್ಲಿ ಶೇ.19ರ ಏರಿಕೆಯನ್ನು ಕಂಡಿದೆ.

ಹೊಸ ಹೊಸ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಮ್ಮ ಬ್ಯಾಂಕ್ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ. ವರದಿ ವರ್ಷದಲ್ಲಿ ರೂ.6748.84 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯನ್ನು ಕಂಡಿದೆ. 2018-19ನೇ ಸಾಲಿಗೆ ರೂ.7700 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ.

3561.24 ಕೋಟಿ ರೂಪಾಯಿ ಠೇವಣಿ

ಸಾಮಾನ್ಯವಾಗಿ ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‍ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಬ್ಯಾಂಕ್ ತನ್ನ 105 ಶಾಖೆಗಳ ಮುಖಾಂತರ 2017-18ನೇ ಸಾಲಿನಲ್ಲಿ ಒಟ್ಟು 3561.24 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗಳಲ್ಲಿ ಮುಂಚೂಣಿಯಲ್ಲಿದೆ.

2778.30 ಕೋಟಿ ರೂಪಾಯಿ ಮುಂಗಡ

ಸ್ಪರ್ಧಾತ್ಮಕ ಆರ್ಥಿಕ ಹಿನ್ನಡೆಯಲ್ಲಿಯೂ ಬ್ಯಾಂಕ್ 2778.30 ಕೋಟಿ ರೂಪಾಯಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ 1100.13 ಕೋಟಿ ರೂಪಾಯಿ, ಮಧ್ಯಮಾವಧಿ ಸಾಲ 99.35 ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು 1199.48 ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ರೂ. 3187.60 ಕೋಟಿಯಾಗಿರುತ್ತದೆ.

ಸತತ 23 ವರ್ಷಗಳಿಂದ ಕೃಷಿ ಸಾಲ ವಸೂಲಾತಿಯಲ್ಲಿ ಶೇಕಡಾ 100ರ ಸಾಧನೆ

ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ 100ರ ವಸೂಲಾತಿಯನ್ನು ಕಂಡು ದಾಖಲೆ ನಿರ್ಮಿಸಿ, ಸಾಧನೆಗೈದಿದೆ. ಇಂತಹ ಸಾಧನೆಯನ್ನು ಕಳೆದ 23 ವರ್ಷಗಳಿಂದ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. 2018ನೇ ಮಾರ್ಚ್ ಅಂತ್ಯಕ್ಕೆ ಅವಿಭಜಿತ ದ.ಕ. ಜಿಲ್ಲೆಯ 18 ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಸಾಲ ವಸೂಲಾತಿಯಲ್ಲಿ ಶೇಕಡಾ 100ರ ಸಾಧನೆಗೈದಿದೆ.

ಬ್ಯಾಂಕಿನ ಆರ್ಥಿಕ ತಖ್ತೆ

ಬ್ಯಾಂಕ್‍ಗೆ ಒಟ್ಟು 960 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.139.33 ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ.4844.60 ಕೋಟಿ ಆಗಿದ್ದು, ಇದು ಕಳೆದ ವರ್ಷಕ್ಕಿಂತ (ರೂ.4338.95 ಕೋಟಿ) ಶೇಕಡ 11.65 ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.105.51 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ.

“ರುಪೇ” (RuPay) ಕಿಸಾನ್ ಕ್ರೆಡಿಟ್ ಕಾರ್ಡ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕ್ರೆಡಿಟ್ ಕಾರ್ಡ್‍ನ್ನು ನೀಡಿದೆ. ಈಗಾಗಲೇ 84,000 ರುಪೇ ಕಿಸಾನ್ ಕಾರ್ಡ್‍ಗಳನ್ನು ರೈತರಿಗೆ ವಿತರಿಸಲಾಗಿದೆ. 43,621 ರುಪೇ ಡೆಬಿಟ್ ಕಾರ್ಡ್‍ಗಳನ್ನು ಬ್ಯಾಂಕ್‍ನ ಇತರ ಗ್ರಾಹಕರಿಗೆ ನೀಡಲಾಗಿದೆ.

 

ಮುಂದಿನ ಯೋಜನೆಗಳು

• ಟ್ಯಾಬ್ ಬ್ಯಾಂಕಿಂಗ್: ಬ್ಯಾಂಕ್ ವ್ಯವಹಾರವನ್ನು ಸರಳೀಕರಿಸುವ ನಿಟ್ಟಿನಲ್ಲಿ ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗ್ರಾಹಕರಿಗೆ ಪರಿಚಯಿಸಲು ಬ್ಯಾಂಕ್ ಮುಂದಾಗಿದೆ. ಮನೆ ಅಥವಾ ಕಛೇರಿಗಳಲ್ಲಿ ಕುಳಿತು ಮೊಬೈಲ್ ಸಂಪರ್ಕವಿರುವ ಬ್ಯಾಂಕಿನ ಟ್ಯಾಬ್ಲೆಟ್ ಬಳಸಿ ತಮ್ಮ ಬ್ಯಾಂಕ್ ಖಾತೆಯನ್ನು ತೆರೆಯುವ ಹಾಗೂ ನಿರ್ವಹಿಸುವ ನೂತನ ವ್ಯವಸ್ಥೆ ಇದಾಗಿದೆ. ಇದರಿಂದ ಗ್ರಾಹಕರು ಪ್ರತಿ ಬಾರಿ ಶಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ.

• ಮೊಬೈಲ್ ಬ್ಯಾಂಕಿಂಗ್: ಈ ಯೋಜನೆಯ ಮುಖಾಂತರ ಗ್ರಾಹಕರ ಮೊಬೈಲ್ ಮೂಲಕ ಬ್ಯಾಂಕಿನ ಶಾಖೆಗಳ ನಡುವೆ ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾಯಿಸಬಹುದು. ಅಲ್ಲದೆ ಮೊಬೈಲ್ ಮುಖಾಂತರವೇ ಗ್ರಾಹಕರ ಖಾತೆಯ ವ್ಯವಹಾರದ ವಿಚಾರಣೆ, ಮಿನಿಸ್ಟೇಟ್‍ಮೆಂಟ್ ಹಾಗೂ ಪಾಸ್‍ಬುಕ್ ನಿರ್ವಹಣೆಯ ಸೌಲಭ್ಯವಿದೆ.

• ಕಾಮನ್ ಸಾಫ್ಟ್‍ವೇರ್: ಏಕರೂಪದ ಲೆಕ್ಕ ಪದ್ದತಿಯನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕಾಮನ್ ಸಾಫ್ಟ್‍ವೇರ್‍ನ್ನು ಅಳವಡಿಸಲು ಕಾರ್ಯ ಯೋಜನೆ ರೂಪಿಸಲಾಗುವುದು.

•ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆ: NPCI (National Payment Corporation of  India) ಸಹಯೋಗದೊಂದಿಗೆ IMPS (Inter Bank Mobile   Payment System) ಯೋಜನೆಯನ್ನು ಕಾರ್ಯಗತಗೊಳಿಸಲು ಚಿಂತನೆ ನಡೆಸಿದೆ. ಈ ಯೋಜನೆಯಿಂದ ಗ್ರಾಹಕರ ಒಂದು ಖಾತೆಯಿಂದ ಇನ್ನೊಂದು ಖಾತೆಗೆ ಅದೇ ಬ್ಯಾಂಕಿನಿನ ಅಥವಾ ಇತರ ಬ್ಯಾಂಕಿನ ಖಾತೆಗೆ ಹಣ ವರ್ಗಾಯಿಸಬಹುದು. ಈ ರೀತಿ ಹಣ ವರ್ಗಾವಣೆಗೆ ಮೊಬೈಲ್ ನಂಬ್ರ ಹಾಗೂ MMID ಉಪಯೋಗಿಸಿ ಈ ವ್ಯವಸ್ಥೆಯ ಪ್ರಯೋಜನ ಪಡೆಯಬಹುದು.

• ಇಂಟರ್‍ನೆಟ್ ಬ್ಯಾಂಕಿಂಗ್ ಸೇವೆ ಶೀಘ್ರದಲ್ಲಿ ಆರಂಭಗೊಳ್ಳಲಿದೆ.

• ಸೋಲಾರ್ ಸ್ಥಾಪನೆಗೆ ಪ್ರೋತ್ಸಾಹ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸೌರಶಕ್ತಿಯ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಸೋಲಾರ್ ಅಳವಡಿಕೆಗೆ ಹೆಚ್ಚು ಪ್ರೋತ್ಸಾಹವನ್ನು ಬ್ಯಾಂಕ್ ಮುಖಾಂತರ ನೀಡಲಾಗುವುದು.

 

ಬ್ಯಾಂಕಿನ ಸಾಧನೆ

• ಬ್ಯಾಂಕಿಗೆ 19 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 17 ಬಾರಿ ನಬಾರ್ಡ್ ಪ್ರಶಸ್ತಿ ಸತತವಾಗಿ ದೊರೆತಿದೆ.

• ಸತತ 2 ವರ್ಷಗಳಿಂದ “ಎಫ್‍ಸಿಬಿಎ” ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್ ಪುರಸ್ಕøತಗೊಂಡಿದೆ.

• ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‍ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ. ಬ್ಯಾಂಕ್ ಒಟ್ಟು 32,371 ಗುಂಪುಗಳನ್ನು ಹೊಂದಿದೆ.

• ಜಿಲ್ಲೆಯಲ್ಲಿ ಒಟ್ಟು 1,12,055 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 75,661 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.

• ಬ್ಯಾಂಕಿನ ಎಲ್ಲಾ ಶಾಖೆಗಳು ಇಂಟರ್‍ನೆಟ್, ಕೋರ್ ಬ್ಯಾಂಕಿಂಗ್ ನಂತಹ ಉತ್ಕøಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ.

• ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್ ಎನ್ನುವ ಆಶಯದೊಂದಿಗೆ “ಮೊಬೈಲ್ ಬ್ಯಾಂಕಿಂಗ್”ನ್ನು ಕಾರ್ಯರೂಪಕ್ಕೆ ತಂದ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಹೆಗ್ಗಳಿಕೆ.

• ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಭದ್ರತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ.

• ಬ್ಯಾಂಕ್ ಸಿಬ್ಬಂದಿಗಳಿಗೆ ಪಿಂಚಣೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿದೆ.

• ಕಿಯೋಕ್ಸ್ ಯಂತ್ರ ಅಳವಡಿಕೆ: ಕೇಂದ್ರ ಶಾಖೆ ಕೊಡಿಯಾಲ್‍ಬೈಲ್‍ನಲ್ಲಿ ಗ್ರ್ರಾಹಕರಿಗೆ ತ್ವರಿತ ಸೇವೆಯನ್ನು ನೀಡುವ ಉದ್ದೇಶದಿಂದ ಕ್ಯಾಷ್ ಡೆಪಾಸಿಟ್ ಹಾಗೂ ಚೆಕ್ ಡೆಪಾಸಿಟ್ ಯಂತ್ರಗಳನ್ನು ಅಳವಡಿಸಲಾಗಿದೆ.

• ತರಬೇತಿ ಕೇಂದ್ರ: ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಧ್ಯಕ್ಷರು ಹಾಗೂ ನಿರ್ದೇಶಕರು ಮತ್ತು ಸದಸ್ಯರಿಗೆ ಸಹಕಾರಿ ಕ್ಷೇತ್ರದ ಬಗ್ಗೆ ವಿಶೇಷ ಅನುಭವ ನೀಡಲು ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರವನ್ನು ತೆರೆಯಲಾಗಿದೆ.

 

 

ಡಾ|| ಎಂ.ಎನ್. ರಾಜೇಂದ್ರ ಕುಮಾರ್      
ಅಧ್ಯಕ್ಞರು