Toll Free No: 1800-425-0889

Home | Contact

News

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಅನುಷ್ಠಾನದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ರಾಜ್ಯಕ್ಕೆ ಪ್ರಥಮ
---

ಮಂಗಳೂರು : ರೈತರ ಪಾಲಿಗೆ ವರದಾನವಾಗಿರುವ ಕೇಂದ್ರ ಸರಕಾರದ ಬಹು ಮಹಾತ್ವಾಕಾಂಕ್ಷೆಯ ಯೋಜನೆಯಾದ “ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ”ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ಸಮರ್ಪಕವಾಗಿ ಜ್ಯಾರಿಗೆ ತಂದು ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಚಾರ ಎಂದು ಎಸ್‍ಸಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಅವರು ಸೋಮವಾರ ಬ್ಯಾಂಕಿನಲ್ಲಿ ಕೆನರಾ ಬ್ಯಾಂಕ್ ಹಾಗೂ ಲೀಡ್ ಡಿಸ್ಟ್ರಿಕ್ಟ್ ಬ್ಯಾಂಕ್ ವತಿಯಿಂದ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು.

ಹವಾಮಾನ ವೈಪರೀತ್ಯದಿಂದಾಗುವ ಬೆಳೆಗಳ ಹಾನಿಯನ್ನು ಭರಿಸಲು ಸರಕಾರ ಕೈಗೊಂಡ ಈ ಯೋಜನೆಯಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿದ್ದು, ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಿಗಿಂತ ಮುನ್ನಡೆಯನ್ನು ಕಂಡು ಎಸ್‍ಸಿಡಿಸಿಸಿ ಬ್ಯಾಂಕ್ ದಾಖಲೆ ನಿರ್ಮಿಸಿದೆ. 2021-22ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 3,45,421 ರೈತರು ಈ ಯೋಜನೆಯಡಿ ದಾಖಲಾತಿಗೊಂಡಿದ್ದು, ಈ ಪೈಕಿ ಎಸ್‍ಸಿಡಿಸಿಸಿ ಬ್ಯಾಂಕ್ ಮೂಲಕ 94,045 ರೈತರು ಈ ಯೋಜನೆಯಲ್ಲಿ ದಾಖಲಾತಿ ಪಡೆದು, ರೂ.11.79 ಕೋಟಿ ವಿಮಾ ಪ್ರೀಮಿಯಂ ಜಮೆಯಾಗಿದೆ ಎಂದು ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದ ಕೆನರಾ ಬ್ಯಾಂಕ್ ಮಹಾಪ್ರಬಂಧಕರಾದ ಶ್ರೀ ಯೋಗೀಶ್ ಆಚಾರ್, ಸಹಕಾರ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಅದರಲ್ಲೂ ರೈತಪರ ನಿಲುವಿನಲ್ಲಿ ಹಾಗೂ ಚಿಂತನೆಯಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಕಾರ್ಯವೆಸಗುತ್ತಿರುವುದು ಅಭಿನಂದನಾರ್ಹ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀಯವರ ಪರಿಕಲ್ಪನೆಯ ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಅತ್ಯಂತ ಯಶಸ್ವಿಯಾಗಿದೆ. ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ದೂರದರ್ಶಿ ನಾಯಕತ್ವ ಇದಕ್ಕೆ ಪ್ರೇರಣೆಯಾಗಿದ್ದು, ಇವರ ಮಾರ್ಗದರ್ಶನದಲ್ಲಿ ಸಹಕಾರ ಕ್ಷೇತ್ರವು ಇನ್ನಷ್ಟು ಉಜ್ವಲತೆಯನ್ನು ಪಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಶ್ರೀ ಪ್ರವೀಣ್, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಶ್ರೀ ಹೆಚ್.ಎನ್. ನಾಯಕ್, ನಬಾರ್ಡ್ ಡಿಡಿಎಂ ಶ್ರೀಮತಿ ಸಂಗೀತಾ ಕರ್ತ, ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಶಶಿಕುಮಾರ್ ರೈ ಬಾಲ್ಯೊಟ್ಟು, ಶ್ರೀ ರಾಜು ಪೂಜಾರಿ, ಶ್ರೀ ಎಸ್.ಬಿ. ಜಯರಾಮ್ ರೈ, ಶ್ರೀ ಮಹೇಶ್ ಹೆಗ್ಡೆ, ಶ್ರೀ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶ್ರೀ ಟಿ.ಜಿ. ರಾಜಾರಾಮ್ ಭಟ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಬಿ.ರವೀಂದ್ರ, ಮಹಾ ಪ್ರಬಂಧಕರಾದ ಶ್ರೀ ಗೋಪಿನಾಥ್ ಭಟ್, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀ ಸುಧೀರ್ ಕುಮಾರ್ ಹಾಗೂ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.

ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಶ್ರೀ ಪ್ರವೀಣ್ ಸ್ವಾಗತಿಸಿದರು. ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್ ವಂದಿಸಿದರು.


ಕೇಂದ್ರ ಪುರಸ್ಕøತ ಯೋಜನೆಗಳು ‘ಜನರ ಸ್ವಾವಲಂಬಿ ಬದುಕಿಗೆ ಆಧಾರ’
- ಡಾ| ಎಂ.ಎನ್. ರಾಜೇಂದ್ರ ಕುಮಾರ್
---

ಮಂಗಳೂರು : ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಜಾರಿಗೆ ತಂದಿರುವ ‘ಕೇಂದ್ರ ಪುರಸ್ಕøತ ಹೊಸ ಯೋಜನೆಗಳು’ ಗ್ರಾಮಾಂತರ ಪ್ರದೇಶದ ಜನರ ಸ್ವಾವಲಂಬಿ ಬದುಕಿಗೆ ಆಧಾರವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್)ನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನಬಾರ್ಡ್, ಲೀಡ್ ಬ್ಯಾಂಕ್ ಹಾಗೂ ತೋಟಗಾರಿಕಾ ಇಲಾಖೆ ಸಹಯೋಗದಲ್ಲಿ ಬ್ಯಾಂಕಿನಲ್ಲಿ ನಡೆದ ಕೃಷಿ ಮೂಲಭೂತ ಸೌಕರ್ಯ ನಿಧಿ ಮತ್ತು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಹಣಕಾಸು ಸೌಲಭ್ಯಗಳ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಆತ್ಮನಿರ್ಭರ ಭಾರತ’ ಕಾರ್ಯಕ್ರಮದಲ್ಲಿ ಸ್ಥಳೀಯತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಸ್ಥಳೀಯ ತಯಾರಿಕೆಗೆ ಸ್ಥಳೀಯ ಮಾರುಕಟ್ಟೆ ಒದಗಿಸುವ ಜೊತೆಗೆ ಜನರನ್ನು ಸ್ವಾವಲಂಬಿ ಜೀವನಕ್ಕೆ ಪ್ರೋತ್ಸಾಹ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಎಸ್‍ಸಿಡಿಸಿಸಿ ಬ್ಯಾಂಕ್ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿ, ತನ್ನ 105 ಶಾಖೆಗಳ ಮೂಲಕ ಆಹಾರ ಕೈಗಾರಿಕೆಯ ಕಿರು ಉದ್ದಿಮೆಗಳ ಬೆಳವಣಿಗೆಗೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಮೂಲಕ ಜಿಲ್ಲೆಯ ನವೋದಯ ಸ್ವ-ಸಹಾಯ ಸಂಘಗಳನ್ನು ತೊಡಗಿಸಿಕೊಂಡು ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಅವಕಾಶ ಕಲ್ಪಿಸಿದೆ ಎಂದರು.

ಶಿಬಿರದ ಉಪಯುಕ್ತತೆ ಬಗ್ಗೆ ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಶ್ರೀ ಪ್ರವೀಣ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀ ಎಚ್.ಆರ್. ನಾಯಕ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್‍ನ ಉಪಾಧ್ಯಕ್ಷರಾದ ಶ್ರೀ ವಿನಯಕುಮಾರ್ ಸೂರಿಂಜೆ, ನಬಾರ್ಡ್ ಡಿಡಿಎಂ ಶ್ರೀಮತಿ ಸಂಗೀತಾ ಕರ್ತಾ, ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ಬ್ಯಾಂಕಿನ ನಿರ್ದೇಶಕರುಗಳಾದ ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಎಂ. ವಾದಿರಾಜ ಶೆಟ್ಟಿ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ. ಹರೀಶ್ಚಂದ್ರ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ., ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಶ್ರೀ ಪ್ರಸನ್ನ ಕುಮಾರ್, ಮೀನುಗಾರಿಕೆ ಇಲಾಖೆಯ ಕಿರಿಯ ಸಹಾಯಕ ನಿರ್ದೇಶಕರಾದ ಶ್ರೀ ದಿಲೀಪ್ ಕುಮಾರ್ ಉಪಸ್ಥಿತರಿದ್ದರು.

ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀ ಪ್ರವೀಣ್ ಭಾಗವಹಿಸಿದರು. ಬ್ಯಾಂಕಿನ ಮಹಾಪ್ರಬಂಧಕರಾದ ಶ್ರೀ ಗೋಪಿನಾಥ್ ಭಟ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.


Tekkatte Branch

 


ಎಸ್‍ಸಿಡಿಸಿಸಿ ಬ್ಯಾಂಕ್‍ಗೆ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್” ಪ್ರಶಸ್ತಿ
*****

ಮಂಗಳೂರು : ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್)ಗೆ ಮಹಾರಾಷ್ಟ್ರದ ಅವೀಸ್ ಪಬ್ಲಿಕೇಷನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ - 2020 ಪ್ರಶಸ್ತಿ”ಯನ್ನು ಬುಧವಾರ ಮೈಸೂರುನಲ್ಲಿ ಪ್ರದಾನ ಮಾಡಲಾಯಿತು.

ಮೈಸೂರಿನ ಸೈಲೆಂಟ್ ಶೋರ್ಸ್ ರೆಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾದ ಮೂರು ದಿನಗಳ ವಾರ್ಷಿಕ ಶೃಂಗಸಭೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೈಸೂರು ಲೋಕಸಭಾ ಸದಸ್ಯರಾದ ಶ್ರೀ ಪ್ರತಾಪಸಿಂಹ ಅವರಿಂದ “ಬ್ಯಾಂಕೊ ಬ್ಲೂ ರಿಬ್ಬನ್ - 2020” ಪ್ರಶಸ್ತಿಯನ್ನು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಸ್ವೀಕರಿಸಿದರು.

ಪ್ರತಿಷ್ಠಿತ ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿಗೆ ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸಹಕಾರ ಬ್ಯಾಂಕುಗಳ ಪತ್ರಿಕ್ರಿಯೆ ಮತ್ತು ಭಾಗವಹಿಸುವಿಕೆಯನ್ನು ಸ್ವೀಕರಿಸಿದ್ದು, ಅಖಿಲ ಭಾರತ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳ ವಿಭಾಗದಲ್ಲಿ ಅಸಾಧಾರಣ ಸಾಧನೆಗೈದಿರುವ ಎಸ್‍ಸಿಡಿಸಿಸಿ ಬ್ಯಾಂಕ್‍ನ್ನು 2020ರ ಬ್ಯಾಂಕೋ ಬ್ಲೂ ರಿಬ್ಬನ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನಸ್ನೇಹಿ ಬ್ಯಾಂಕ್: ಸಹಕಾರಿ ರಂಗದಲ್ಲಿ ಹೊಸ ಆವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ, ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಗುರುತಿಸಿಕೊಂಡಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಉತ್ಕøಷ್ಠ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಮರ್ಥ ನಾಯಕತ್ವದಲ್ಲಿ ಕಾರ್ಯನಿರ್ವಹಿಸಿ, “ಜನಸ್ನೇಹಿ ಬ್ಯಾಂಕ್” ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶಿಷ್ಟ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ಹಲವು ಸಾಧನೆಗಳನ್ನು ಗೈದಿದೆ. 19 ಬಾರಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 18 ಬಾರಿ ನಬಾರ್ಡ್ ಪ್ರಶಸ್ತಿ ಹಾಗೂ 2 ಬಾರಿ ಬ್ಯಾಂಕಿಂಗ್ ಫ್ರಂಟಿಯರ್ಸ್ ಪ್ರಶಸ್ತಿಯೂ ಎಸ್‍ಸಿಡಿಸಿಸಿ ಬ್ಯಾಂಕಿಗೆ ಲಭಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ಬ್ಯಾಂಕೊ” ಅವೀಸ್ ಪಬ್ಲಿಕೇಷನ್ ಮುಖ್ಯ ಸಂಪಾದಕರಾದ ಶ್ರೀ ಅವಿನಾಶ್ ಶಿಂತ್ರೆ ಗುಂಡೇಲ್, ಗ್ಯಾಲೆಕ್ಸಿ ಇನ್ಮಾ ಪುಣೆ ಇದರ ನಿರ್ದೇಶಕರಾದ ಶ್ರೀ ಅಶೋಕ್ ನಾೈಕ್, ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಶ್ರೀ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಶ್ರೀ ಶಶಿಕುಮಾರ್ ರೈ ಬಾಲ್ಯೊಟ್ಟು, ಶ್ರೀ ರಾಜು ಪೂಜಾರಿ, ಶ್ರೀ ಎಂ. ಮಹೇಶ್ ಹೆಗ್ಡೆ, ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಸದಾಶಿವ ಉಳ್ಳಾಲ್, ಬ್ಯಾಂಕಿನ ಸಿಇಒ ಶ್ರೀ ರವೀಂದ್ರ ಬಿ., ಮಹಾಪ್ರಬಂಧಕರಾದ ಶ್ರೀ ಗೋಪಿನಾಥ್ ಭಟ್, ನವೋದಯ ಟ್ರಸ್ಟಿ ಶ್ರೀ ಸುನಿಲ್ ಕುಮಾರ್ ಬಜಗೋಳಿ ಹಾಗೂ ಜಯಪ್ರಕಾಶ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.


HUNSEMAKKI BRANCH SHIFTING AND INAUGURATION


ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಮಾನವೀಯ ಕಾರ್ಯ :  ಪತ್ರಕರ್ತರಿಗೆ ಕಿಟ್ ವಿತರಿಸಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ರಾಜ್ಯದಲ್ಲಿ ಪತ್ರಕರ್ತರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕೋವಿಡ್ ಲಸಿಕೆ ಹಾಕಿಸಲು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ಪತ್ರಕರ್ತರ ಉಳಿದ ಬೇಡಿಕೆಗಳ ಬಗ್ಗೆ ಸರಕಾರ ಪರಿಶೀಲನೆ ನಡೆಸಲಿದೆ. ಕೊರೋನಾ ಸಂಕಷ್ಟದಿಂದ ಮಾಧ್ಯಮಗಳಲ್ಲಿ ವೃತ್ತಿ ನಡೆಸುತ್ತಿರುವ ಕೆಲವರೂ ಜೀವನ ನಡೆಸಲಾಗದ ಸ್ಥಿತಿಯಲ್ಲಿದ್ದಾರೆ. ಅಂತವರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಆಹಾರ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಗರದ ಕೊಡಿಯಾಲ್‌ಬೈಲ್‌ನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಈಚೆಗೆ (ಮೇ -15ರಂದು) ಪತ್ರಕರ್ತರಿಗೆ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು.

ಪತ್ರಕರ್ತರಲ್ಲಿ ಆತ್ಮವಿಶ್ವಾಸದ ಕೆಲಸ :                ಕೊರೋನಾ ಸಂಕಷ್ಟ ನಡುವೆಯೂ ಮಾಧ್ಯಮ ಸಿಬ್ಬಂದಿ ಜನರ ನಡುವೆ ಇದ್ದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಹಾರ ಕಿಟ್ ನೀಡುವ ಮೂಲಕ ಪತ್ರಕರ್ತರಲ್ಲಿ ಆತ್ಮವಿಶ್ವಾಸ ಮೂಡಿಸಲಾಗಿದೆ. ಕೋವಿಡ್ ಆರಂಭವಾದ ಬಳಿಕ ಸರಕಾರ ಹಾಗೂ ಸಮಾಜಕ್ಕೆ ಡಿಸಿಸಿ ಬ್ಯಾಂಕ್ ಮೂಲಕ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ನೆರವು ನೀಡುತ್ತಿದ್ದಾರೆ. ಬೆಂಗಳೂರಿನಲ್ಲೂ ಅವರು ವಿವಿಧ ಕಿಟ್ ವಿತರಿಸಿದ್ದಾರೆ  ಎಂದು ಸಚಿವರು ತಿಳಿಸಿದರು.

ರಾಜೇಂದ್ರ ಕುಮಾರ್ ಕಾರ್ಯ ಶ್ಲಾಘನೀಯ :            ಶಾಸಕ ಡಾ. ವೈ. ಭರತ್ ಶೆಟ್ಟಿ ಮಾತನಾಡಿ, ಕೊರೋನಾದಿಂದ ಸಮಾಜದ ಎಲ್ಲ ವರ್ಗದ ಜನರೂ ಕಷ್ಟ ಅನುಭವಿಸುತ್ತಿದ್ದಾರೆ. ಈ ಸಂದರ್ಭ ಪರಸ್ಪರ ಕಷ್ಟಕ್ಕೆ ನೆರವಾಗುವುದು ಎಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಕಿಟ್ ವಿತರಿಸಿದ ಡಾ. ಎಂ.ಎನ್.ರಾಜೇಂದ್ರ ಕುಮಾರ್  ಅವರ ಕಾರ್ಯ ಶ್ಲಾಘನೀಯ. ಕೋವಿಡ್ ಮೂರನೇ ಅಲೆ ತಡೆಗೆ ಜಿಲ್ಲಾಡಳಿತ ಅಗತ್ಯ ಸಿದ್ದತೆ ನಡೆಸಿದೆ ಎಂದರು.

ಬ್ಯಾಂಕಿನ ಏಳಿಗೆಗೆ ಮಾಧ್ಯಮ ಪಾತ್ರ ಮಹತ್ವದ್ದು :   ಅಧ್ಯಕ್ಷತೆ ವಹಿಸಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ.  ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಕೊರೋನಾ ಆರಂಭವಾದ ಬಳಿಕ ನಮ್ಮ ಬ್ಯಾಂಕ್ ಸರಕಾರಕ್ಕೆ ಸಹಕಾರ ನೀಡುತ್ತಿದೆ. ಆರೋಗ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗೆ ಈಗಾಗಲೇ ನೆರವು ನೀಡಲಾಗಿದೆ. ಎಸ್ ಸಿಡಿಸಿಸಿ ಬ್ಯಾಂಕ್ ಬೆಳೆಯಲು ಪತ್ರಿಕಾ ಮಾಧ್ಯಮವೂ ಒಂದು ಪ್ರಮುಖ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರಿಗೆ ಆಹಾರ ಕಿಟ್ ವಿತರಿಸಲಾಗಿದೆ. ಬೆಂಗಳೂರಿನಲ್ಲೂ ವಿವಿಧ ವರ್ಗದ ಜನರಿಗೆ 2 ಲಕ್ಷ ಅಕ್ಕಿಚೀಲ, 1 ಲಕ್ಷ ಮಾಸ್ಕ್ ವಿತರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ. ನಾಯಕ್, ಲೀಡ್ ಡಿಸ್ಟ್ರಿಕ್ ಮ್ಯಾನೇಜರ್ ಪ್ರವೀಣ್ ಕುಮಾರ್, ನಬಾರ್ಡ್ ಡಿಡಿಎಂ ಸಂಗೀತಾ ಕರ್ತಾ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಬ್ಯಾಂಕ್ ಉಪಾಧ್ಯಕ್ಷರಾದ  ವಿನಯ ಕುಮಾರ್ ಸೂರಿಂಜೆ, ನಿದೇಶಕರಾದ ಬಿ. ನಿರಂಜನ್, ಭಾಸ್ಕರ ಎಸ್. ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ, ಸದಾಶಿವ ಉಳ್ಳಾಲ್, ಎಸ್. ರಾಜು ಪೂಜಾರಿ,  ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈಬಿ., ರಾಜೇಶ್ ರಾವ್, ಎಸ್.ಬಿ. ಜಯರಾಮ ರೈ, ಕೆ. ಹರೀಶ್ಚಂದ್ರ, ಕೆ. ಜೈರಾಜ್ ರೈ,ಬಿ. ಅಶೋಕ್ ಕುಮಾರ್ ಶೆಟ್ಟಿ , ಸಿಇಒ ರವೀಂದ್ರ ಬಿ.,  ಜಿಎಂ ಗೋಪಿನಾಥ್ ಭಟ್  ಉಪಸ್ಥಿತರಿದ್ದರು.

ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ , ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ವಂದಿಸಿದರು. 

* ವರದಿ :  ಎಸ್.ಜಗದೀಶ್ಚಂದ್ರ ಅಂಚನ್ ,                                      ಸೂಟರ್ ಪೇಟೆ


ಎಸ್‍ಸಿಡಿಸಿಸಿ ಬ್ಯಾಂಕ್ ರೈತ ಸ್ಪಂದನ ಉದ್ಘಾಟನೆ

ರೈತರಿಗೆ ಬೆಂಬಲ ಬೆಲೆ ವಿತರಣೆ ಶೀಘ್ರ: ಸಚಿವ ಎಸ್.ಟಿ.ಸೋಮಶೇಖರ್
ಭತ್ತ, ರಾಗಿ, ಜೋಳ ಸೇರಿದಂತೆ ನಾನಾ ಬೆಳೆಗಳಿಗೆ ಸಂಬಂಧಿಸಿದ 770 ಕೋಟಿ ರೂ. ಬೆಂಬಲ ಬೆಲೆಯನ್ನು ರೈತರ ಖಾತೆ ಗಳಿಗೆ ಶೀಘ್ರ ಜಮೆ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಬ್ಯಾಂಕ್‍ನ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ `ರೈತ ಸ್ಪಂದನ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಾಸಹಾಯ ಸಂಘಗಳಿಗೆ ಸಾಲ ವಿತರಿಸಿ ಮಾತನಾಡಿ, ಕೋವಿಡ್‍ನಿಂದ ಮೃತಪಟ್ಟ ರೈತರ ಕುಟುಂಬದ ಸಹಾಯಕ್ಕೆ ಡಾ.ರಾಜೇಂದ್ರ ಕುಮಾರ್ ನೇತೃತ್ವದ ಎಸ್‍ಸಿಡಿಸಿಸಿ ಬ್ಯಾಂಕ್ ನಿಂತಿರುವುದು ಮಾನವೀಯತೆಯ ಕಾರ್ಯ. ಇದು ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದರು.
ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅವರು ಪ್ರಧಾನ ಮಂತ್ರಿ ಸ್ವ- ನಿಧಿ ಸಾಲ ವಿತರಿಸಿ ಮಾತನಾಡಿ, ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಅವರು ಅನೇಕ ಸೌಲಭ್ಯಗಳನ್ನು ಪ್ರಕಟಿಸಿ ಈ ಭಾಗದ ರೈತರ, ಮಹಿಳೆಯರ ಆರ್ಥಿಕ ವ್ಯವಸ್ಥೆಗೆ ಶಕ್ತಿ ತುಂಬಿದವರು ಎಂದು ಹೇಳಿದರು.
ಕಳೆದ 26 ವರ್ಷಗಳಿಂದ ನಮ್ಮ ಭಾಗದ ರೈತರು ಶೇ.100ರಷ್ಟು ಸಾಲವನ್ನು ಮರು ಪಾವತಿ ಮಾಡುವ ಮೂಲಕ ಇಡೀ ದೇಶದಲ್ಲೇ ವಿಶಿಷ್ಟ ಸಾಧನೆ ಮಾಡಿದ್ದಾರೆ. ರೈತರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸದಿಂದ ಇದು ಸಾಧ್ಯವಾಗಿದೆ. ರೈತರ ಸಾಲ ವಿತರಣೆಯಲ್ಲಿ ಕೆಲವೊಂದು ಸಮಸ್ಯೆಗಳಿದ್ದು, ಸರಕಾರ ಶೀಗ್ರದಲ್ಲಿ ಇದನ್ನು ಪರಿಹರಿಸುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಉಮಾನಾಥ ಕೋಟ್ಯಾನ್, ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಸಹಕಾರಿ ಸಂಘದ ಮೈಸೂರು ವಲಯದ ಜಂಟಿ ನಿರ್ದೇಶಕ ಪ್ರಕಾಶ್ ರಾವ್, ಅಪೆಕ್ಸ್ ಬ್ಯಾಂಕ್ ಎಂಡಿ ದೇವರಾಜ್, ಮೀನುಗಾರರ ಫೆಡರೇಶನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಸಹಕಾರಿ ಯೂನಿಯನ್ ಅಧ್ಯಕ್ಷರಾದ ಪ್ರಸಾದ್ ಕೌಶಲ್ಯ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಎಸ್‍ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ.ರಾಜಾರಾಮ ಭಟ್, ಎಂ.ವಾಧಿರಾಜ ಶೆಟ್ಟಿ, ಸದಾಶಿವ ಉಳ್ಳಾಲ್, ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ರಾಜೇಶ್ ರಾವ್, ಎಸ್.ಬಿ.ಜಯರಾಮ್ ರೈ, ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರೀಶ್ಚಂದ್ರ, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ, ಬ್ಯಾಂಕ್‍ನ ಸಿಇಒ ರವೀಂದ್ರ ಉಪಸ್ಥಿತರಿದ್ದರು.
ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಶಶಿಕುಮಾರ್ ರೈ ಬಿ. ವಂದಿಸಿದರು. ಲಕ್ಷ್ಮಣ್ ಕುಮಾರ್ ಮಲ್ಲೂರು ಕಾರ್ಯಕ್ರಮ ನಿರೂಪಿಸಿದರು.

ಸಹಕಾರಿ ಕ್ಷೇತ್ರದ ಜತೆಯಲ್ಲಿ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ನಾವು ಕೆಲಸ ಮಾಡುತ್ತಿದ್ದೇವೆ. ಈ ಕಾರಣದಿಂದಾಗಿಯೇ ವಾಣಿಜ್ಯ ಬ್ಯಾಂಕ್‍ಗಳಿಗಿಂತಲೂ ಮಿಗಿಲಾದ ಸೌಲಭ್ಯವನ್ನು ನಾವು ನಮ್ಮ ಸದಸ್ಯರಿಗೆ ನೀಡುತ್ತಿದ್ದೇವೆ. ರೈತ ಸ್ಪಂದನ ಕಾರ್ಯಕ್ರಮದ ಮೂಲಕ ಸುಮಾರು 445 ಕೋಟಿ ರೂ. ಸಾಲ ವಿತರಿಸಿದ್ದೇವೆ. -ಡಾ.ಎಂ.ಎನ್.ರಾಜೇಂದ್ರ ಕುಮಾರ್, ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ

ಸಹಕಾರ ಸಂಘಗಳಿಗೆ ಆದಾಯ ತೆರಿಗೆ ವಿನಾಯಿತಿ ಮಾಡಲು ಕೇಂದ್ರಕ್ಕೆ ಮನವಿ
ಸಹಕಾರ ಸಂಘಗಳಿಗೆ ಆದಾಯ ತೆರಿಗೆ ವಿಧಿಸುತ್ತಿರುವುದರಿಂದ ಅನೇಕ ಸಹಕಾರ ಸಂಸ್ಥೆಗಳಿಗೆ ಆರ್ಥಿಕ ಹೊರೆ ಉಂಟಾಗುತ್ತಿದೆ. ಇದರಿಂದ ಈ ನಿಯಮವನ್ನು ತೆಗೆದುಹಾಕಬೇಕು ಅಥವಾ ವಿನಾಯಿತಿ ನೀಡಬೇಕು ಎಂದು ಕೇಂದ್ರ ಸಹಕಾರ ಸಚಿವರಿಗೆ ಮನವಿ ಮಾಡಲಾಗುವುದು ಎಂದು ರಾಜ್ಯ ಸಹಕಾರ ಹಾಗೂ ಎಪಿಎಂಸಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ನಗರದ ಎಸ್‍ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಆದಾಯ ತೆರಿಗೆ ಪಾವತಿ ನಿಯಮ ಇರಲಿಲ್ಲ. ಆದಾಯ ತೆರಿಗೆ ಪಾವತಿ ಮಾಡಬೇಕು ಎಂಬ ನಿರ್ಣಯವನ್ನು ಹಿಂದಿನ ಯುಪಿಎ ಸರಕಾರ ಕೈಗೊಂಡಿತ್ತು. ಇದರಿಂದ ನೋಫ್ರಾಫಿಟ್, ನೋ ಲಾಸ್ ತತ್ವದ ಅಡಿಯಲ್ಲಿ ವ್ಯವಹಾರ ಮಾಡುವ ಸಹಕಾರ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೇಂದ್ರದ ಸಹಕಾರ ಸಚಿವ ಅಮಿತ್ ಶಾ ಅವರನ್ನು ನಮ್ಮ ರಾಜ್ಯದ ನಿಯೋಗ ಸದ್ಯದಲ್ಲೇ ಭೇಟಿಯಾಗಲಿದ್ದೇವೆ. ಈ ಸಂದರ್ಭ ನಮ್ಮ ಬೇಡಿಕೆಯ ಬಗ್ಗೆ ಮನವಿ ಸಲ್ಲಿಸಲಿದ್ದೇವೆ ಎಂದರು.
ಏಕರೂಪದ ಸಾಫ್ಟ್‍ವೇರ್ ಅಳವಡಿಕೆ ಆದರೆ ಇಡೀ ರಾಜ್ಯದ ಎಲ್ಲ ಸಹಕಾರ ಬ್ಯಾಂಕ್‍ಗಳಲ್ಲಿ ಎಷ್ಟೆಷ್ಟು ಸಾಲ ವಿತರಣೆ ಆಗಿದೆ, ಎಷ್ಟು ವಸೂಲಾತಿ ಆಗಿದೆ ಎಂಬ ಮಾಹಿತಿಗಳನ್ನು ಒಂದೇ ಕಡೆಗಳಲ್ಲಿ ಕುಳಿತು ಪರಿಶೀಲನೆ ನಡೆಸಬಹುದಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಎಸ್‍ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಹಾಗೂ ನಿರ್ದೇಶಕರು, ಸಹಕಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸರಕಾರ ಸಂಘಗಳಿಗೆ ಏಕರೂಪದ ಸಾಫ್ಟ್‍ವೇರ್ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಕಳೆದ ಬಜೆಟ್‍ನಲ್ಲಿ 198 ಕೋಟಿ ರೂ. ಘೋಷಣೆ ಮಾಡಿದ್ದರು. ರಾಜ್ಯದ ಅಪೆಕ್ಸ್ ಬ್ಯಾಂಕ್, 21 ಡಿಸಿಸಿ ಬ್ಯಾಂಕ್ ಹಾಗೂ ಸುಮಾರು 5400 ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳಿಗೆ ಏಕರೂಪದ ಸಾಫ್ಟ್‍ವೇರ್ ಮಾಡಿಸಲು ಚಿಂತನೆ ನಡೆಸಿದ್ದೆವು. ಇದನ್ನು ಆರಂಭಿಸಿ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ಅವರಿಗೆ ಹೇಳಿದ್ದೆವು. ಆದರೆ ಕೋವಿಡ್ 19 ಕಾರಣದಿಂದ ಸ್ವಲ್ಪ ವಿಳಂಬ ಆಗಿದೆ.
-ಎಸ್.ಟಿ.ಸೋಮಶೇಖರ್, ಸಚಿವ


ಲ್ಯಾಂಪ್ಸ್ ಸಹಕಾರಿ ಸಂಘಗಳು

ಸರಕಾರದ ಆರ್ಥಿಕ ಸವಲತ್ತುಗಳನ್ನು ಲ್ಯಾಂಪ್ಸ್ ಸಹಕಾರ ಸಂಸ್ಥೆಗಳು ಸದುಪಯೋಗ ಪಡಿಸಿಕೊಳ್ಳಬೇಕು - ಡಾ.ಎಂ.ಎನ್.ರಾಜೇಂದ್ರ ಕುಮಾರ್
----------------------------
ಮಂಗಳೂರು *  ಲ್ಯಾಂಪ್ಸ್ ಸಹಕಾರಿ ಸಂಘಗಳು
ಪರಿಶಿಷ್ಟ ಪಂಗಡಗಳ ಜನಾಂಗದ ಹಿತಸಕ್ತಿಗೆ ಪೂರಕವಾದ ಉದ್ದೇಶದಿಂದ ಅವರನ್ನು ಸಂಘಟಿಸಿ, ಅಭಿವೃದ್ಧಿಯ ಯೋಜನೆ ರೂಪಿಸುವ ಕಾರ್ಯ ನಿರ್ವಹಿಸಬೇಕು. ಸಹಕಾರ ಇಲಾಖೆ ಮೂಲಕ ಸರಕಾರದಿಂದ ದೊರೆಯುವ ಆರ್ಥಿಕ ಯೋಜನೆಗಳನ್ನು ಸದುಪಯೋಗ ಪಡಿಸಿ ಸೂಕ್ತ ಫಲಾನುಭಾವಿಗಳಿಗೆ ತಲುಪಿಸುವ ಕೆಲಸವನ್ನು ಲ್ಯಾಂಪ್ಸ್ ಸಹಕಾರ ಸಂಸ್ಥೆಗಳು ಮಾಡಬೇಕೆಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅವರು ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ಹಾಗೂ ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರಿ ಮಹಾಮಂಡಳಕ್ಕೆ ಮಂಜೂರಾದ ಅನುದಾನದ ಸದ್ಭಳಕೆ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯ ಉದ್ಘಾಟನೆ ನೇರವೇರಿಸಿ ಮಾತನಾಡಿದರು.
ಸಾಮಾಜಿಕ ಸ್ಥಿತಿಗತಿ ಸುಧಾರಣೆ : ಜಿಯಾವುಲ್ಲಾ
ಸಭೆಯ ಅಧ್ಯಕ್ಷತೆಯನ್ನು ವಹಿಸಿದ  ಸಹಕಾರ ಇಲಾಖೆಯ ನಿಬಂಧಕರಾದ ಶ್ರೀ ಜಿಯಾವುಲ್ಲಾ ಅವರು ಮಾತನಾಡಿ, ಲ್ಯಾಂಪ್ಸ್ ಸಹಕಾರ ಸಹಕಾರಿ ಸಂಘಗಳ ಮೂಲಕ ಪರಿಶಿಷ್ಟ ಪಂಗಡಗಳ ಜನಾಂಗದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಸುಧಾರಣೆಯಾಗಿದೆ . ಲ್ಯಾಂಪ್ಸ್ ಸಂಘಗಳಿಗೆ  ಸರಕಾರದಿಂದ ವಿಶೇಷ ಅನುದಾನಗಳು ಸಹಕಾರ ಇಲಾಖೆ ಮೂಲಕ ನೀಡಲಾಗಿದ್ದು , ಈ ಅನುದಾನಗಳ ಸದ್ಬಳಕೆಯ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆದಿದೆ ಎಂದರು.
ಸಮಾರಂಭದಲ್ಲಿ  ಸಹಕಾರ ಸಂಘಗಳ ಅಪರ ನಿಬಂಧಕರಾದ ಶ್ರೀ ಸಿ.ಎನ್.ದೇವರಾಜ್,  ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಪ್ರಕಾಶ್ ರಾವ್ , ಮೈಸೂರು ವಿಭಾಗದ ಸಹಕಾರ ಸಂಘಗಳ ಉಪನಿಬಂಧಕರುಗಳಾದ ಶ್ರೀ ಬಿ.ಕೆ.ಸಲೀಂ , ಶ್ರೀ ಪ್ರವೀಣ್ ಬಿ ನಾಯಕ್, ಶ್ರೀ ವಿಜಯಕುಮಾರ್ ಹಾಗೂ ವಿಕ್ರಮರಾಜ್ ಅರಸ್ ಹಾಗೂ 
ಎಸ್ ಸಿಡಿಸಿಸಿ ಬ್ಯಾಂಕಿನ 
ಮುಖ್ಯಕಾರ್ಯನಿರ್ವಹಣಾಧಿಕಾರಿ  ಶ್ರೀ ರವೀಂದ್ರ ಬಿ.  ಉಪಸ್ಥಿತರಿದ್ದರು. ಸಭೆಯಲ್ಲಿ ಮೈಸೂರು ವಿಭಾಗದ ಲ್ಯಾಂಪ್ಸ್ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.


ಎಸ್‍ಸಿಡಿಸಿಸಿ ಬ್ಯಾಂಕ್ ಕಾರ್ಯವೈಖರಿಗೆ ಸಹಕಾರ ಸಚಿವರ ಮೆಚ್ಚುಗೆ

ಮಂಗಳೂರು: ಕರ್ನಾಟಕ ರಾಜ್ಯ ಸರಕಾರದ ಸಹಕಾರ ಸಚಿವರಾದ ಶ್ರೀ ಎಸ್.ಟಿ ಸೋಮಶೇಖರ್ ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಪ್ರಗತಿ ಪರಿಶೀಲನೆ ಹಾಗೂ ಸಹಕಾರ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

          ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್ ರಾಜೇಂದ್ರ ಕುಮಾರ್ ಅವರು ಸ್ವಾಗತಿಸಿ, ಸಚಿವರನ್ನು ಸನ್ಮಾನಿಸಿದರು.  ಬ್ಯಾಂಕ್ ಕೃಷಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಅಲ್ಪಾವಧಿ ಕೃಷಿ ಸಾಲವನ್ನು ನೀಡಿದೆ.  ವರದಿ ವರ್ಷದಲ್ಲಿ ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.1596.04 ಕೋಟಿ ಹಾಗೂ ಮಧ್ಯಮಾವಧಿ ಸಾಲ ರೂ.129.34 ಕೋಟಿ ಸಾಲ ನೀಡಿದ್ದು, ಹೀಗೆ ಒಟ್ಟು ಕೃಷಿ ಕ್ಷೇತ್ರಕ್ಕೆ ರೂ.1725.38 ಕೋಟಿ ರೂ. ಸಾಲ ನೀಡಿದೆ.  ಮಾತ್ರವಲ್ಲ ಕೇಂದ್ರ ಸರಕಾರದ ಆತ್ಮನಿರ್ಭರ ಯೋಜನೆಯಡಿಯಲ್ಲಿ ಹೈನುಗಾರಿಕೆ, ಮೀನುಗಾರಿಕೆ ಉದ್ದೇಶಗಳಿಗೆ ಸಾಲ ನೀಡಿದ್ದು, ಒಟ್ಟು 7418 ಫಲಾನುಭವಿಗಳಿಗೆ ಬ್ಯಾಂಕ್ ರೂ.16.89 ಕೋಟಿ ಸಾಲ ನೀಡಿದೆÉ ಎಂದು ಡಾ|ಎಂ.ಎನ್ ರಾಜೇಂದ್ರ ಕುಮಾರ್‍ರವರು ಸಚಿವರಿಗೆ ವಿವರಿಸಿದರು.

          ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್ ಅವರು ಸಹಕಾರಿ ಇಲಾಖೆಯ ಪ್ರಗತಿಯನ್ನು ಸಚಿವರಿಗೆ ವಿವರಿಸಿದರು.

ಮೆಚ್ಚುಗೆ: ಸಚಿವರು ಎಸ್‍ಸಿಡಿಸಿಸಿ ಬ್ಯಾಂಕ್‍ನ ಪ್ರಗತಿ ಹಾಗೂ ಬ್ಯಾಂಕಿನ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು.  ಸಹಕಾರ ಇಲಾಖೆಯ ವರದಿಯನ್ನು ಪರಿಶೀಲಿಸಿದರು.  ಸರಕಾರ 2020-21ನೇ ಸಾಲಿನಲ್ಲಿ ನಿಗದಿಪಡಿಸಿದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸಾಲ ನೀಡಿಕೆಯ ಗುರಿಯನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷವಾಗಿ ಸಾಧಿಸಿರುವುದನ್ನು ಪ್ರಶಂಶಿಸಿದರು. 

ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಬೆಳಪು,  ಶ್ರೀ ಶಶಿ ಕುಮಾರ್ ರೈ ಬಾಲ್ಯೊಟ್ಟು, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪನಾ ನಿರ್ದೇಶಕರಾದ ಡಾ| ಎಸ್.ಟಿ ಸುರೇಶ್, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀ ಸುಧೀರ್ ಕುಮಾರ್, ಬ್ಯಾಂಕಿನ ಮಹಾಪ್ರಬಂಧಕರಾದ  ಶ್ರೀ ಗೋಪಿನಾಥ್ ಭಟ್ ಹಾಗೂ ಬ್ಯಾಂಕಿನ ಅಧಿಕಾರಿಗಳು ಹಾಗೂ ಸಹಕಾರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಅನುಷ್ಠಾನದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ರಾಜ್ಯಕ್ಕೆ ಪ್ರಥಮ


ಮಂಗಳೂರು : ರೈತರ ಪಾಲಿಗೆ ವರದಾನವಾಗಿರುವ ಕೇಂದ್ರ ಸರಕಾರದ ಬಹು ಮಹಾತ್ವಾಕಾಂಕ್ಷೆಯ ಯೋಜನೆಯಾದ “ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ”ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ಸಮರ್ಪಕವಾಗಿ ಜ್ಯಾರಿಗೆ ತಂದು ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಚಾರ ಎಂದು ಎಸ್‍ಸಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಅವರು ಸೋಮವಾರ ಬ್ಯಾಂಕಿನಲ್ಲಿ ಕೆನರಾ ಬ್ಯಾಂಕ್ ಹಾಗೂ ಲೀಡ್ ಡಿಸ್ಟ್ರಿಕ್ಟ್ ಬ್ಯಾಂಕ್ ವತಿಯಿಂದ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು.
ಹವಾಮಾನ ವೈಪರೀತ್ಯದಿಂದಾಗುವ ಬೆಳೆಗಳ ಹಾನಿಯನ್ನು ಭರಿಸಲು ಸರಕಾರ ಕೈಗೊಂಡ ಈ ಯೋಜನೆಯಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿದ್ದು, ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಿಗಿಂತ ಮುನ್ನಡೆಯನ್ನು ಕಂಡು ಎಸ್‍ಸಿಡಿಸಿಸಿ ಬ್ಯಾಂಕ್ ದಾಖಲೆ ನಿರ್ಮಿಸಿದೆ. 2021-22ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 3,45,421 ರೈತರು ಈ ಯೋಜನೆಯಡಿ ದಾಖಲಾತಿಗೊಂಡಿದ್ದು, ಈ ಪೈಕಿ ಎಸ್‍ಸಿಡಿಸಿಸಿ ಬ್ಯಾಂಕ್ ಮೂಲಕ 94,045 ರೈತರು ಈ ಯೋಜನೆಯಲ್ಲಿ ದಾಖಲಾತಿ ಪಡೆದು, ರೂ.11.79 ಕೋಟಿ ವಿಮಾ ಪ್ರೀಮಿಯಂ ಜಮೆಯಾಗಿದೆ ಎಂದು ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.
ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದ ಕೆನರಾ ಬ್ಯಾಂಕ್ ಮಹಾಪ್ರಬಂಧಕರಾದ ಶ್ರೀ ಯೋಗೀಶ್ ಆಚಾರ್, ಸಹಕಾರ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಅದರಲ್ಲೂ ರೈತಪರ ನಿಲುವಿನಲ್ಲಿ ಹಾಗೂ ಚಿಂತನೆಯಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಕಾರ್ಯವೆಸಗುತ್ತಿರುವುದು ಅಭಿನಂದನಾರ್ಹ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀಯವರ ಪರಿಕಲ್ಪನೆಯ ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಅತ್ಯಂತ ಯಶಸ್ವಿಯಾಗಿದೆ. ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ದೂರದರ್ಶಿ ನಾಯಕತ್ವ ಇದಕ್ಕೆ ಪ್ರೇರಣೆಯಾಗಿದ್ದು, ಇವರ ಮಾರ್ಗದರ್ಶನದಲ್ಲಿ ಸಹಕಾರ ಕ್ಷೇತ್ರವು ಇನ್ನಷ್ಟು ಉಜ್ವಲತೆಯನ್ನು ಪಡೆಯಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಶ್ರೀ ಪ್ರವೀಣ್, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಶ್ರೀ ಹೆಚ್.ಎನ್. ನಾಯಕ್, ನಬಾರ್ಡ್ ಡಿಡಿಎಂ ಶ್ರೀಮತಿ ಸಂಗೀತಾ ಕರ್ತ, ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಶ್ರೀ ಶಶಿಕುಮಾರ್ ರೈ ಬಾಲ್ಯೊಟ್ಟು, ಶ್ರೀ ರಾಜು ಪೂಜಾರಿ, ಶ್ರೀ ಎಸ್.ಬಿ. ಜಯರಾಮ್ ರೈ,        ಶ್ರೀ ಮಹೇಶ್ ಹೆಗ್ಡೆ, ಶ್ರೀ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶ್ರೀ ಟಿ.ಜಿ. ರಾಜಾರಾಮ್ ಭಟ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಶ್ರೀ ಬಿ.ರವೀಂದ್ರ, ಮಹಾ ಪ್ರಬಂಧಕರಾದ ಶ್ರೀ ಗೋಪಿನಾಥ್ ಭಟ್, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀ ಸುಧೀರ್ ಕುಮಾರ್ ಹಾಗೂ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.
ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ಶ್ರೀ ಪ್ರವೀಣ್ ಸ್ವಾಗತಿಸಿದರು. ಸಹಕಾರಿ ಸಂಘಗಳ ಉಪನಿಬಂಧಕರಾದ                 ಶ್ರೀ ಪ್ರವೀಣ್ ಬಿ. ನಾಯಕ್ ವಂದಿಸಿದರು.


ಎಸ್‍ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿತಜ್ಞ ಪ್ರತಿನಿಧಿಗಳ ಸಭೆ

ಮಂಗಳೂರು* 2021-22ನೇ ಸಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್‍ಸಿಡಿಸಿಸಿ ಬ್ಯಾಂಕಿನಲ್ಲಿ ಜನವರಿ 25ನೇ ಸೋಮವಾರ ಬ್ಯಾಂಕಿನ ಅಧ್ಯಕ್ಷರಾದ ಡಾ|| ಎಂ.ಎನ್. ರಾಜೇಂದ್ರ ಕುಮಾರ್‍ರವರ ಅಧ್ಯಕ್ಷತೆಯಲ್ಲಿ ಜರಗಿತು.

          ಅಧ್ಯಕ್ಷತೆ ವಹಿಸಿದ ಡಾ|| ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಾತನಾಡಿ ಎಸ್‍ಸಿಡಿಸಿಸಿ ಬ್ಯಾಂಕ್ 2020-21ನೇ ಸಾಲಿಗೆ ಬೆಳೆಸಾಲಗಳ ಗುರಿಯು ರೂ.1,370.00 ಕೋಟಿ ಆಗಿದ್ದು, 31-03-2020ರ ಅಂತ್ಯಕ್ಕೆ ಬೆಳೆಸಾಲಗಳ ಹೊರಬಾಕಿ ರೂ.1,213.95 ಕೋಟಿ ಆಗಿರುತ್ತದೆ.  ಈಗಾಗಲೇ ರೂ.1361.40 ಕೋಟಿ ಬೆಳೆಸಾಲ ನೀಡಿದೆ ಎಂದರು. 

          ನಬಾರ್ಡ್ ಪುರ್ನಧನ ಸಾಲ ಹಾಗೂ ಎಸ್‍ಸಿಡಿಸಿಸಿ ಬ್ಯಾಂಕಿನ ಸ್ವಂತ ಬಂಡವಾಳದಿಂದ ಕೃಷಿ ಉದ್ದೇಶಕ್ಕಾಗಿ 2019-20ನೇ ಸಾಲಿನಲ್ಲಿ ಒಟ್ಟು 151.82 ಕೋಟಿ ಅವಧಿ ಸಾಲವನ್ನು ನೀಡಲಾಗಿದೆ. 2020-21ನೇ ಸಾಲಿಗೆ ಈಗಾಗಲೇ ರೂ.77.26 ಕೋಟಿ ಮಧ್ಯಮಾವಧಿ/ಧೀರ್ಘಾವಧಿ ಕೃಷಿ ಸಾಲವನ್ನು ಬ್ಯಾಂಕ್ ನೀಡಿದೆ ಎಂದು ಸಭೆಯಲ್ಲಿ             ಡಾ|| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

          2021-22ನೇ ಸಾಲಿಗೆ ವಿವಿಧ ಬೆಳೆಗಳಿಗೆ ಕೊಡತಕ್ಕ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿಗಳೊಂದಿಗೆ, ನಬಾರ್ಡ್, ಲೀಡ್ ಬ್ಯಾಂಕ್, ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿಕಾರಿಗಳ ಸಮಾಲೋಚನೆಯ ಮೂಲಕ ನಿಗದಿಪಡಿಸಲಾಯಿತು.

          ಸಭೆಯಲ್ಲಿ ಎಸ್‍ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ, ಶ್ರೀ ಭಾಸ್ಕರ್ ಎಸ್ ಕೋಟ್ಯಾನ್, ಶ್ರೀ ಎಂ.ವಾದಿರಾಜ್ ಶೆಟ್ಟಿ, ಶ್ರೀ ದೇವಿಪ್ರಸಾದ್ ಶೆಟ್ಟಿ ಬೆಳಪು, ಶ್ರೀ ಶಶಿಕುಮಾರ್ ರೈ, ಶ್ರೀ ಎಸ್. ಬಿ ಜಯರಾಮ್ ರೈ, ಶ್ರೀ ರಾಜು ಪೂಜಾರಿ, ಶ್ರೀ ಕೆ. ಜೈರಾಜ್ ಬಿ,ರೈ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಮಹೇಶ್ ಹೆಗ್ಡೆ, ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಹರೀಶ್ಚಂದ್ರ, ದ.ಕ ಜಿಲ್ಲಾ ಸಹಕಾರಿ ಯೂನಿಯನ್‍ನ ಅಧ್ಯಕ್ಷ ಶ್ರೀ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ನಬಾರ್ಡ್ ಡಿಡಿಎಂ ಶ್ರೀಮತಿ ಸಂಗೀತಾ ಕರ್ತಾ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ರವೀಂದ್ರ ಬಿ., ಲೀಡ್ ಡಿಸ್ಟ್ರಿಕ್ಟ್ ಬ್ಯಾಂಕಿನ ಅಧಿಕಾರಿ ಗಿರೀಶ್ ಕುಮಾರ್ ಯು,.  ತೋಟಗಾರಿಕೆ ಉಪ ನಿರ್ದೇಶಕಾರದ ಶ್ರೀ ಎಚ್. ಆರ್ ನಾಯಕ್, ಪಶುಸಂಗೋಪನೆಯ ಇಲಾಖೆಯ ಉಪ ನಿರ್ದೇಶಕರರಾದ ಶ್ರೀ ಪ್ರಸನ್ನ ಕುಮಾರ್ ಟಿ.ಜಿ, ರಬ್ಬರ್ ಬೋರ್ಡ್ ಅಧಿಕಾರಿ ಶ್ರೀ ಬಾಲಕೃಷ್ಣ ಎಸ್, ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಎ. ಗುರುಕೀರ್ತಿ ಎ., ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ವೀಣಾ ಕೆ. ಆರ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಡಾ| ಸುಶ್ಮಿತಾ ರಾವ್, ದಕ್ಷಿಣ ಕನ್ನಡ ಜಿಲ್ಲಾ ಮೀನುಗಾರಿಕಾ ಮಹಾಮಂಡಳದ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಹರೀಶ್ ಕುಮಾರ್ ಹಾಗೂ ಬ್ಯಾಂಕಿನ ಮಹಾಪ್ರಬಂಧಕರಾದ ಶ್ರೀ ಗೋಪಿನಾಥ್ ಭಟ್ ಹಾಗೂ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.  


BELVAI BRANCH SHIFTING AND INAUGURATION

Instant loan facility for Novodaya SHG group's


Training NSHG


IFFCO MD AWASTI


ಎಸ್‍ಸಿಡಿಸಿಸಿ ಬ್ಯಾಂಕಿನಲ್ಲಿ ಮೀನುಗಾರಿಕೆ / ಪಶುಸಂಗೋಪನೆ ತಾಂತ್ರಿಕ ತಜ್ಞರ ಸಭೆ

ನಬಾರ್ಡ್ ನಿರ್ದೇಶನದನ್ವಯ 2019-20ನೇ ಸಾಲಿಗೆ ಮೀನುಗಾರಿಕೆ ಹಾಗೂ ಪಶುಸಂಗೋಪನೆ ಚಟುವಟಿಕೆಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಮಾದರಿಯಲ್ಲಿ ಬಂಡವಾಳ ಸಾಲವನ್ನು ನೀಡುವ ಬಗ್ಗೆ ಮಿತಿಯನ್ನು ನಿಗದಿಪಡಿಸುವ ಜಿಲ್ಲಾ ಮಟ್ಟದ ತಾಂತ್ರಿಕ ತಜ್ಞರ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ (ಎಸ್‍ಸಿಡಿಸಿಸಿ ಬ್ಯಾಂಕ್) ಸೋಮವಾರ ನಡೆಯಿತು.


ಎಸ್‍ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿತಜ್ಞ ಪ್ರತಿನಿಧಿಗಳ ಸಭೆ

2020-21ನೇ ಸಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್‍ಸಿಡಿಸಿಸಿ ಬ್ಯಾಂಕಿನಲ್ಲಿ ಡಿಸೆಂಬರ್ 13ನೇ ಶುಕ್ರವಾರ ಬ್ಯಾಂಕಿನ ಅಧ್ಯಕ್ಷರಾದ ಡಾ|| ಎಂ.ಎನ್. ರಾಜೇಂದ್ರ ಕುಮಾರ್‍ರವರ ಅಧ್ಯಕ್ಷತೆಯಲ್ಲಿ ಜರಗಿತು.


‘ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ’ ಪುರಸ್ಕøತ ಎಸ್. ರಾಜು ಪೂಜಾರಿಯವರಿಗೆ ಸನ್ಮಾನ

ಸಹಕಾರಿ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿರುವ ಹಿರಿಯ ಸಹಕಾರಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ಶ್ರೀ ಎಸ್. ರಾಜು ಪೂಜಾರಿಯವರು ಈಚೆಗೆ ಮೈಸೂರಿನಲ್ಲಿ ನಡೆದ 66ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ ಪಡೆದಿದ್ದು, ಅವರನ್ನು ಸನ್ಮಾನಿಸುವ ಕಾರ್ಯಕ್ರಮ ಸೋಮವಾರ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನಲ್ಲಿ ನಡೆಯಿತು.


ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಗೆ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ರೂ.5ಲಕ್ಷ ನೆರವು‘ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿ’ಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘ ಸಂಸ್ಥೆಗಳಿಂದ ರೂ.1.30ಕೋಟಿ ದೇಣಿಗೆಯ ಚೆಕ್‍ನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರ


ನೂತನ ಸಹಕಾರ ಸಚಿವರಾದ ಶ್ರೀ ಎಸ್.ಟಿ.ಸೋಮಶೇಖರರವರಿಗೆ ಸ್ವಾಗತ ಕೋರಿದ ಡಾ|ಎಂ.ಎನ್.ರಾಜೇಂದ್ರ ಕುಮಾರ್:

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ನೂತನ ಸಹಕಾರ ಸಚಿವರಾದ ಶ್ರೀ ಎಸ್.ಟಿ,ಸೋಮಶೇಖರರವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್.ರಾಜೇಂದ್ರ ಕುಮಾರ್‍ರವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.


ಗ್ರಾಹಕರ ಸೇವೆಯಿಂದ ಎಸ್‍ಸಿಡಿಸಿಸಿ ಬ್ಯಾಂಕ್ ಸದೃಢವಾಗಿ ಬೆಳದಿದೆ ಡಾ|ಎಂ.ಎನ್.ರಾಜೇಂದ್ರ ಕುಮಾರ್

ಅವರು ಗುರುವಾರ ಬ್ಯಾಂಕಿಗೆ ಭೇಟಿ ನೀಡಿದ ಮದುರೈ ಮತ್ತು ಶಿವಗಂಗಾ ಕೇಂದ್ರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರಿಗೆ ಬ್ಯಾಂಕಿನ ಪ್ರಗತಿಯ ಬಗ್ಗೆ ವಿವರಿಸಿ ಮಾತನಾಡಿದರು.


ಜನರ ವಿಶ್ವಾಸದಲ್ಲಿ ಸಹಕಾರ ಕ್ಷೇತ್ರ ಬಲಾಢ್ಯವಾಗಿದೆ - ಡಾ|ಎಂ.ಎನ್ ರಾಜೇಂದ್ರ ಕುಮಾರ್

ಅವರು ನಗರದ ಬೆಂದೂರ್‍ವೆಲ್ ಇಸ್ಸೆಲ್ ವಿಲ್‍ಕಾನ್ ಕಾಂಪ್ಲೆಕ್ಸ್‍ನಲ್ಲಿ ನೂತನವಾಗಿ ಕಾರ್ಯಾರಂಭಗೊಂಡಿರುವ ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪೆನಿಯ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.


ನೌಕರರಲ್ಲಿ ಪ್ರಾಮಾಣಿಕತೆಯೊಂದಿಗೆ ಪರಿಶ್ರಮ ಬೇಕು – ಡಾ|ಎಂ.ಎನ್. ರಾಜೇಂದ್ರ ಕುಮಾರ್

ನೌಕರರಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವನೆಯ ಜೊತೆ ಪರಿಶ್ರಮವಿದ್ದಾಗ ಯಾವುದೇ ಸಂಸ್ಥೆ ಅಭಿವೃದ್ಧಿಯನ್ನು ಹೊಂದಲು ಸಾಧ್ಯವೆಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ


ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ “ಬಹು ಪ್ರಭಾವಶಾಲಿ ಸಹಕಾರಿ ನಾಯಕ” ಪ್ರಶಸ್ತಿ ಪ್ರದಾನ

ನವದೆಹಲಿಯ ಗ್ಲೋಬಲ್ ಎಜುಕೇಶನ್ ಆಂಡ್ ಎಕನಾಮಿಕ್ ಡೆವಲಪ್‍ಮೆಂಟ್ ಫೋರಮ್ ಸಂಸ್ಥೆ ಡಾ| ಎಂ.ಎನ್ ರಾಜೇಂದ್ರ ಕುಮಾರ್‍ರವರಿಗೆ ನೀಡಿದ “ಬಹು ಪ್ರಭಾವಶಾಲಿ ಸಹಕಾರಿ ನಾಯಕ – 2019” ರಾಷ್ಟ್ರೀಯ ಪ್ರಶಸ್ತಿಯನ್ನು ಡಾ|ಎಂ.ಎನ್ ರಾಜೇಂದ್ರ ಕುಮಾರ್‍ರವರ ಅನುಪಸ್ಥಿತಿಯಲ್ಲಿ ಬ್ಯಾಂಕಿನ ನಿರ್ದೇಶಕರಾದ ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶ್ರೀ ಶಶಿಕುಮಾರ್ ರೈ ಬಾಲ್ಯೋಟ್ಟು, ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ ಇವರು ಸ್ವೀಕರಿಸಿದರು.ಭಾರತದಲ್ಲೇ ಮೊದಲ ಬಾರಿ ಎಸ್‍ಸಿಡಿಸಿಸಿ ಬ್ಯಾಂಕ್ ಕಾರ್ಯದಕ್ಷತೆಗೆ ಅಮೆರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಅಂತರಾಷ್ಟ್ರೀಯ ಮಾನ್ಯತೆ


Kankanady new branch inauguration / ಕಂಕನಾಡಿ ಹೊಸ ಶಾಖೆ ಉದ್ಘಾಟನೆ.


Annual General Body Meeting 2019 - 20

ಎಸ್‍ಸಿಡಿಸಿಸಿ ಬ್ಯಾಂಕ್ ಸಾರ್ವಕಾಲಿಕ ಗರಿಷ್ಠ
ರೂ.30.29 ಕೋಟಿ ಲಾಭ, ಶೇ.9.00 ಡಿವಿಡೆಂಡ್ ಘೋಷಣೆ

***

ಮಂಗಳೂರು* ಒಂದು ಶತಮಾನದಷ್ಟು ಸುದೀರ್ಘ ಇತಿಹಾಸವನ್ನು ತನ್ನಲ್ಲಿಟ್ಟುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‍ಸಿಡಿಸಿಸಿ ಬ್ಯಾಂಕ್) ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿದೆ. ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನ ಮನ್ನಣೆ ಗಳಿಸಿ ‘ಜನಸ್ನೇಹಿ’ ಬ್ಯಾಂಕ್ ಎನ್ನುವ ಪ್ರೀತಿ ವಿಶ್ವಾಸಕ್ಕೆ ಎಸ್‍ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿದೆ. ಬ್ಯಾಂಕ್ ಸಹಕಾರಿ ರಂಗದಲ್ಲಿ ವಿಶಿಷ್ಠ ವಿನೂತನ ಸಾಧನೆಯೊಂದಿಗೆ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಗಿ ಜನಾನುರಾಗಿಯಾಗಿದೆ. 2018-19ನೇ ಸಾಲಿನಲ್ಲಿ ಬ್ಯಾಂಕ್ ಸಾರ್ವಕಾಲಿಕ ಗರಿಷ್ಠ ರೂ.30.29 ಕೋಟಿ ಲಾಭ ಗಳಿಸಿ ತನ್ನ ಸದಸ್ಯ ಸಂಘಗಳಿಗೆ ಶೇ.9.00 ಡಿವಿಡೆಂಡ್‍ನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ|| ಎಂ.ಎನ್. ರಾಜೇಂದ್ರ ಕುಮಾರ್‍ರವರು ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಅವರು ಶನಿವಾರ ಬ್ಯಾಂಕಿನ ಸಭಾಭವನದಲ್ಲಿ ನಡೆದ 105ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಹಕಾರ ತತ್ವದ ಮೂಲ ಆಶಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಸ್‍ಸಿಡಿಸಿಸಿ ಬ್ಯಾಂಕ್ ಸಾಧನೆಯ 105 ವರ್ಷಗಳನ್ನು ಪೂರೈಸಿ ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ವರದಿ ವರ್ಷದಲ್ಲಿ ಬ್ಯಾಂಕ್ ಸಾಧಿಸಿದ ಯಶಸ್ಸು ಅಭೂತಪೂರ್ವವಾದದ್ದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ದಿನೇ ದಿನೇ ಸ್ಪರ್ಧೆಯನ್ನು ಎದುರಿಸಿದರೂ ಬ್ಯಾಂಕ್ ಅಭಿವೃದ್ಧಿಯ ಪಥವನ್ನು ಕಂಡು ದೇಶದ ಅಗ್ರಮಾನ್ಯ ಸಹಕಾರಿ ಬ್ಯಾಂಕ್ ಎನಿಸಿಕೊಂಡಿದೆ ಎಂದರು.

ಹೊಸ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ಕøಷ್ಟ ಸೇವೆಯನ್ನು ಬ್ಯಾಂಕ್ ನೀಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇಂಟರ್‍ನೆಟ್, ಕೋರ್ ಬ್ಯಾಂಕಿಂಗ್‍ನಂತಹ ಉನ್ನತ ಸೇವೆಯು ಬ್ಯಾಂಕಿನ 105 ಶಾಖೆಗಳಲ್ಲಿ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ “ಇಂಟರ್ ಬ್ಯಾಂಕಿಂಗ್ ಮೊಬೈಲ್ ಪೇಮೆಂಟ್ ಸಿಸ್ಟಮ್” ಯೋಜನೆಯನ್ನು ಹಾಗೂ “ಇಂಟರ್ ಬ್ಯಾಂಕಿಂಗ್ ಸೇವೆ”ಯನ್ನು ರೂಪಿಸಲು ಬ್ಯಾಂಕ್ ಮುಂದಾಗಿದೆ ಎಂದು ಅವರು ಮಹಾಸಭೆಯಲ್ಲಿ ತಿಳಿಸಿದರು.

ಗುರಿ ಮೀರಿದ ಸಾಧನೆ:

ಸುದೀರ್ಘ ಕಾಲ ಸಾರ್ವಜನಿಕ ಸೇವೆಯಲ್ಲಿರುವ ಎಸ್‍ಸಿಡಿಸಿಸಿ ಬ್ಯಾಂಕ್ ವರದಿ ವರ್ಷದಲ್ಲಿ ಎಲ್ಲಾ ವ್ಯವಹಾರಗಳಲ್ಲೂ ಗುರಿ ಮೀರಿದ ಸಾಧನೆಯನ್ನು ಮಾಡಿದೆ. ಬ್ಯಾಂಕ್ ವರದಿ ವರ್ಷದಲ್ಲಿ ಒಟ್ಟು ರೂ.7588.89 ಕೋಟಿ ವ್ಯವಹಾರ ಸಾಧಿಸುವ ಮೂಲಕ ಗುರಿ ಮೀರಿದ ಸಾಧನೆಗೈದಿದೆ. ವಾಣಿಜ್ಯ ಬ್ಯಾಂಕುಗಳಲ್ಲಿ ಠೇವಣಾತಿ ಸಂಗ್ರಹಣೆಯಲ್ಲಿ ಪೈಪೋಟಿ ಇದ್ದರೂ ಬ್ಯಾಂಕ್ 105 ಶಾಖೆಗಳ ಮೂಲಕ ಒಟ್ಟು ರೂ.3886.57 ಕೋಟಿ ಠೇವಣಿ ಸಂಗ್ರಹಿಸಿ, ಅತೀ ಹೆಚ್ಚು ಠೇವಣಿ ಸಂಗ್ರಹಿಸಿದ ರಾಜ್ಯದ ಪ್ರಥಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಕೀರ್ತಿಗೆ ಪಾತ್ರವಾಗಿದೆ ಎಂದರು.

ಸ್ಪರ್ಧಾತ್ಮಕ ಆರ್ಥಿಕ ಹಿನ್ನಲೆಯಲ್ಲಿಯೂ ಬ್ಯಾಂಕ್ ಆರ್ಥಿಕ ವರ್ಷದಲ್ಲಿ ಸೇವಾ ಬದ್ಧತೆಯನ್ನು ಮೆರೆದು ರೂ.3,014.18 ಕೋಟಿ ಮುಂಗಡ ನೀಡಿದೆ. 977 ಸಹಕಾರಿ ಸಂಘಗಳು ಬ್ಯಾಂಕಿಗೆ ಸದಸ್ಯರಾಗಿದ್ದು ಪಾಲು ಬಂಡವಾಳ ರೂ.178.55 ಕೋಟಿ, ಬ್ಯಾಂಕಿನ ದುಡಿಯುವ ಬಂಡವಾಳ ರೂ.5421.44ಕೋಟಿ, ಬ್ಯಾಂಕ್ ರೂ.111.19 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ ಎಂದು ಅವರು ತಿಳಿಸಿದರು.

ಸಾಲ ವಸೂಲಾತಿಯಲ್ಲಿ ದಾಖಲೆ:

ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲಾ ಕೃಷಿ ಸಾಲಗಳು ಶೇಕಡಾ ನೂರರ ವಸೂಲಾತಿಯನ್ನು ಕಂಡಿದೆ. ಇಂತಹ ಸಾಧನೆಯನ್ನು ಬ್ಯಾಂಕ್ ಕಳೆದ 24 ವರ್ಷಗಳಿಂದ ನಿರಂತರವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 18 ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿ ಸಾಲ ವಸೂಲಾತಿಯಲ್ಲಿ ಶೇಕಡಾ ನೂರರ ಸಾಧನೆ ಮಾಡಿದೆ ಎಂದು ಮಹಾಸಭೆಯಲ್ಲಿ ಅವರು ತಿಳಿಸಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಸಹಾಯ ಗುಂಪುಗಳ ಸಂಘಟನೆಯಲ್ಲೂ ಬ್ಯಾಂಕ್ ಮುಂಚೂಣಿಯಲ್ಲಿದೆ. ಈ ಬ್ಯಾಂಕ್ ಒಟ್ಟು 32,532 ಸ್ವಸಹಾಯ ಗುಂಪುಗಳನ್ನು ವಿವಿಧ ಸಹಕಾರ ಸಂಘಗಳ ಜೋಡಣೆಯ ಮೂಲಕ ರಚಿಸಿಕೊಂಡಿದೆ. ಈ ಗುಂಪುಗಳ ಒಟ್ಟು ಉಳಿತಾಯ ರೂ.104.54 ಕೋಟಿ. ಒಟ್ಟು 32,250 ಸ್ವಸಹಾಯ ಗುಂಪುಗಳಿಗೆ ಸಾಲ ಸಂಯೋಜಿಸಲಾಗಿದ್ದು, ಇದರಲ್ಲಿ ರೂ.165.57 ಕೋಟಿ ಸಾಲ ಹೊರಬಾಕಿ ಇರುತ್ತದೆ.

ಅಪೆಕ್ಸ್/ನಬಾರ್ಡ್ ಪ್ರಶಸ್ತಿ:

ಜನಪರ ಯೋಜನೆಗಳೊಂದಿಗೆ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ದೇಶದ ಗಮನ ಸೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸರ್ವಾಂಗೀಣ ನಿರ್ವಹಣೆಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ 19 ಬಾರಿ ದೊರೆತ್ತಿರುವುದು ಬ್ಯಾಂಕ್‍ನ ಕಾರ್ಯ ಸಾಧನೆಗೆ ಸಂದ ಪುರಸ್ಕಾರ. ಸ್ವಸಹಾಯ ಗುಂಪುಗಳ ನಿರ್ವಹಣೆಗೂ ನಬಾರ್ಡ್ ಪ್ರಶಸ್ತಿ 17 ಬಾರಿ ಬ್ಯಾಂಕಿಗೆ ದೊರೆತ್ತಿದೆ ಎಂದು ಅವರು ತಿಳಿಸಿದರು.

ಎಸ್‍ಸಿಡಿಸಿಸಿ ಬ್ಯಾಂಕ್‍ನಿಂದ ರೂ.50ಲಕ್ಷ:
ನೆರೆಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಗೆ ಎಸ್‍ಸಿಡಿಸಿಸಿ ಬ್ಯಾಂಕ್ ವತಿಯಿಂದ ರೂ.50ಲಕ್ಷ ಹಾಗೂ ಬ್ಯಾಂಕಿನ ಸಿಬ್ಬಂಧಿಗಳ ವತಿಯಿಂದ ರೂ.10.59 ಲಕ್ಷವನ್ನು ನೀಡುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್ ರಾಜೇಂದ್ರ ಕುಮಾರ್‍ರವರು ಮಹಾಸಭೆಯಲ್ಲಿ ಘೋಷಣೆ ಮಾಡಿದರು. ಬ್ಯಾಂಕ್ ಸೇರಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳ ವತಿಯಿಂದ ಒಟ್ಟು ರೂ.1.00 ಕೋಟಿಗೂ ಮಿಕ್ಕಿ ದೇಣಿಗೆಯನ್ನು ಸಂಗ್ರಹಿಸಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಗೆ ನೀಡುವುದಾಗಿ ತಿಳಿಸಿದರು.

ಸಹಕಾರ ಅಧ್ಯಯನ ಪೀಠ ಸ್ಥಾಪನೆ:
ಸಹಕಾರ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗುವ ದೃಷ್ಠಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಹಕಾರ ಅಧ್ಯಯನ ಪೀಠವನ್ನು ಬ್ಯಾಂಕ್ ವತಿಯಿಂದ ಸ್ಥಾಪಿಸಲಾಗುವುದು ಎಂದರು.

ಸನ್ಮಾನ ಪುರಸ್ಕಾರ:
ಈ ಸಂದರ್ಭದಲ್ಲಿ 2018-19ನೇ ಸಾಲಿನಲ್ಲಿ ಶೇ.100ರ ವಸೂಲಾತಿಯಲ್ಲಿ ಸಾಧನೆಗೈದ 18 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಗೌರವಾರ್ಪಣೆ ಮಾಡಲಾಯಿತು. ಲೆಕ್ಕ ಪರಿಶೋಧನಾ “ಅ” ವರ್ಗ ಮತ್ತು “ಬಿ” ವರ್ಗದ ಅತ್ಯುತ್ತಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಆಯ್ದ ತಲಾ 3 ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ 2018-19ನೇ ಸಾಲಿನ ಜಿಲ್ಲಾ ಬ್ಯಾಂಕಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.

2018-19ನೇ ಸಾಲಿನ ಜಿಲ್ಲಾ ಬ್ಯಾಂಕಿನ ಪ್ರೋತ್ಸಾಹಕ ಪ್ರಶಸ್ತಿಯನ್ನು 76 ಸಹಕಾರಿ ಸಂಘಗಳು, 2017-18ನೇ ಸಾಲಿನ ಅಪೆಕ್ಸ್ ಬ್ಯಾಂಕಿನ ಪ್ರಶಸ್ತಿಯನ್ನು 10 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಡೆದಿವೆ. 2018-19ನೇ ಸಾಲಿನ ಪತ್ತಿನ ಸಹಕಾರಿ ಬ್ಯಾಂಕ್ ಪ್ರಶಸ್ತಿಯನ್ನು 6 ಪತ್ತಿನ ಸಹಕಾರಿ ಬ್ಯಾಂಕ್‍ಗಳಿಗೆ ಮತ್ತು ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ ನೀಡುವ ಪ್ರಶಸ್ತಿಯನ್ನು 4 ಪಟ್ಟಣ ಸಹಕಾರಿ ಬ್ಯಾಂಕುಗಳಿಗೆ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಪ್ರಶಸ್ತಿಗೆ ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಿಂದ ತಲಾ 3 ಸಂಘಗಳು ಪ್ರಶಸ್ತಿಯನ್ನು ಪಡೆದಿವೆ. ಮಹಿಳಾ ಹಾಲು ಉತ್ಪಾದಕರ ಸಂಘಗಳ ಪೈಕಿ ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಿಂದ ತಲಾ 3 ಸಂಘಗಳಿಗೆ, ವಿವಿಧೋದ್ದೇಶ ಸಹಕಾರ ಸಂಘಗಳಿಗೆ ನೀಡುವ ಪ್ರಶಸ್ತಿಯನ್ನು 9 ಸಹಕಾರಿ ಸಂಘಗಳು ಸ್ವೀಕರಿಸಿಕೊಂಡಿವೆ.

2018-19ನೇ ಸಾಲಿನ ಜಿಲ್ಲಾ ಬ್ಯಾಂಕ್ ಪ್ರಶಸ್ತಿಗೆ 4 ರೈತ ಸೇವಾ ಕೂಟದ ಮುಖ್ಯ ಸಂಯೋಜಕರಿಗೆ ಪ್ರಶಸ್ತಿಯನ್ನು ನೀಡಲಾಯಿತು. ಮಾತ್ರವಲ್ಲ ವರದಿ ವರ್ಷದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕಿನ 5 ಸಿಬ್ಬಂದಿಗಳು ಹಾಗೂ ಪ್ರಾಥಮಿಕ ಸಹಕಾರಿ ಸಂಘಗಳ 12 ಮಂದಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿವೃತ್ತಿಯನ್ನು ಹೊಂದಿದ್ದು ಇವರಿಗೆ ಬ್ಯಾಂಕಿನಿಂದ ತಲಾ 50,000/-ವನ್ನು ನೀಡಿ ಗೌರವಿಸಲಾಯಿತು. ಬ್ಯಾಂಕಿನ ಪ್ರಗತಿಯಲ್ಲಿ ಗುರಿ ಮೀರಿದ ಸಾಧನೆಗೈದ 25 ಶಾಖಾ ವ್ಯವಸ್ಥಾಪಕರುಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.

ಈ ಸಭೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ, ಶ್ರೀ ಬಿ. ನಿರಂಜನ್, ಶ್ರೀ ಟಿ.ಜಿ. ರಾಜಾರಾಮ್ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಶ್ರೀ ಎಂ. ವಾದಿರಾಜ ಶೆಟ್ಟಿ, ಶ್ರೀ ಕೆ.ಎಸ್. ದೇವರಾಜ್, ಶ್ರೀ ರಾಜು ಪೂಜಾರಿ, ಶ್ರೀ ಶಶಿಕುಮಾರ್ ರೈ ಬಿ, ಶ್ರೀ ಎಸ್.ಬಿ. ಜಯರಾಮ ರೈ, , ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ.ಹರೀಶ್ಚಂದ್ರ, ಶ್ರೀ ಎಂ.ಮಹೇಶ್ ಹೆಗ್ಡೆ, ಶ್ರೀ ಕೆ.ಜೈರಾಜ್ ಬಿ,ರೈ, ಶ್ರೀ ಬಿ.ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಬಿ. ರಾಜೇಶ್ ರಾವ್, ಸಹಕಾರಿ ಸಂಘಗಳ ಉಪನಿಬಂಧಕರುಗಳಾದ ಶ್ರೀ ಬಿ.ಕೆ. ಸಲೀಂ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ, ಮಹಾ ಪ್ರಬಂಧಕರಾದ ಶ್ರೀ ಗೋಫಿನಾಥ್ ಭಟ್ ಹಾಗೂ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು,

ಬ್ಯಾಂಕಿನ ನಿರ್ದೇಶಕರಾದ ಶ್ರೀ ಟಿ.ಜಿ.ರಾಜಾರಾಮ್ ಭಟ್ ಸ್ವಾಗತಿಸಿದರು. ಬ್ಯಾಂಕಿನ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ. ವಂದಿಸಿದರು. ಮಹಾ ಪ್ರಬಂಧಕರಾದ ಶ್ರೀ ಗೋಪಿನಾಥ್ ಭಟ್ ಇವರು ಕಾರ್ಯಕ್ರಮ ನಿರೂಪಿಸಿದರು.

 


Kapu Branch Inaugauration


ಎಸ್‍ಸಿಡಿಸಿಸಿ ಬ್ಯಾಂಕ್ ಮಹಾಸಭೆ
ಸಪ್ಟೆಂಬರ್ -7ರಂದು

ಮಂಗಳೂರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಎಸ್‍ಸಿಡಿಸಿಸಿ ಬ್ಯಾಂಕ್) 2018-19ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 07-09-2019ನೇ ಶನಿವಾರ ಪೂರ್ವಾಹ್ನ 11.00 ಗಂಟೆಗೆ ಬ್ಯಾಂಕಿನ ಪ್ರಧಾನ ಕಛೇರಿಯ “ಉತ್ಕøಷ್ಠ ಸಹಕಾರಿ ಸೌಧ”ದಲ್ಲಿ ನಡೆಯಲಿದೆ ಎಂದು ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ., ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Prathibha Puraskhara


ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ “ಮಹಾತ್ಮಾ ಗಾಂಧಿ ಸಮ್ಮಾನ್” ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

*ಮಂಗಳೂರು: ಎನ್‍ಆರ್‍ಐ ವೆಲ್‍ಫೇರ್ ಸೊಸೈಟಿ ಆಫ್ ಇಂಡಿಯಾ, ನವದೆಹಲಿ ಇದರ ವತಿಯಿಂದ ಲಂಡನಿನ ಹೌಸ್ ಆಫ್ ಕಾಮನ್ಸ್‍ನಲ್ಲಿ ನಡೆದ ಗ್ಲೋಬಲ್ ಇಂಡಿಯನ್ ಶೃಂಗ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇದರ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಪ್ರತಿಷ್ಠಿತ ಮಹಾತ್ಮಾ ಗಾಂಧಿ ಸಮ್ಮಾನ್ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಅಕ್ಟೋಬರ್ 25ರಂದು ಯುನೈಟೆಡ್ ಕಿಂಗ್‍ಡಮ್‍ನ ರಾಜ್ಯ ಉದ್ಯೋಗ ಖಾತೆ ಸಚಿವರಾದ ಶ್ರೀ ಅಲೋಕ್ ಶರ್ಮಾ ಅವರು ಪ್ರದಾನ ಮಾಡಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಜನರಿಗೆ ಬ್ಯಾಂಕಿಂಗ್ ಪರಿಕಲ್ಪನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಹೆಗ್ಗಳಿಕೆ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರದು. 105 ಶಾಖೆಗಳಲ್ಲಿ ಗ್ರಾಹಕರಿಗೆ ಉತ್ಕøಷ್ಠ ಸೇವೆಯನ್ನು ಈ ಬ್ಯಾಂಕ್ ನೀಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸರಿಸಮಾನವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ್ನು ರೂಪುಗೊಳಿಸಿದ ಡಾ| ಎಂ ಎನ್ ರಾಜೇಂದ್ರ ಕುಮಾರ್ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವರು.

24 ವರ್ಷಗಳ ಸುಧೀರ್ಘ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ್ನು ಡಾ| ಎಂ ಎನ್ ರಾಜೇಂದ್ರ ಕುಮಾರ್‍ರವರು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಹಲವಾರು ವಿನೂತನ ಯೋಜನೆಗಳ ಮೂಲಕ ಈ ಬ್ಯಾಂಕನ್ನು ಜನಸ್ನೇಹಿ ಬ್ಯಾಂಕನ್ನಾಗಿ ಪರಿವರ್ತಿಸುವಲ್ಲೂ ಇವರು ಯಶಸ್ವಿಯಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದು ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲೇ ಅಪೂರ್ವವೆನಿಸಿದ ಸಾಧನೆಯನ್ನು ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು ಮಾಡಿರುವರು.

ಇವರು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಾಗ ಕೇವಲ 25 ಶಾಖೆಗಳಿದ್ದು, ಒಟ್ಟು ಠೇವಣಾತಿ ರೂ.64 ಕೋಟಿ. ಹೊರಬಾಕಿ ಸಾಲ ರೂ.46 ಕೋಟಿ. ಲಾಭ ರೂ.42 ಲಕ್ಷ ಮಾತ್ರ ಇತ್ತು. ಆದರೆ ಈಗ ಬ್ಯಾಂಕ್ 105 ಶಾಖೆಗಳನ್ನು ಹೊಂದಿದ್ದು ಬ್ಯಾಂಕಿನ ಠೇವಣಾತಿ ರೂ.3,561.24 ಕೋಟಿ, ಬ್ಯಾಂಕ್ ರೂ.2,778.30 ಕೋಟಿ ಮುಂಗಡ ನೀಡಿದ್ದು, ಒಟ್ಟು ವ್ಯವಹಾರ ರೂ.6,748.84 ಕೋಟಿಯಾಗಿದೆ. ಲಾಭ ರೂ.28.60 ಕೋಟಿಯಾಗಿದೆ. ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಇವರು ಕಾರಣರಾಗಿದ್ದಾರೆ.

ಇವರು ಅಧ್ಯಕ್ಷರಾದ ಬಳಿಕ ಬ್ಯಾಂಕಿಗೆ 19 ವರ್ಷಗಳಿಂದ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎಂದು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 17 ವರ್ಷಗಳಿಂದ ನಬಾರ್ಡ್ ಪ್ರಶಸ್ತಿ ಲಭಿಸಿರುತ್ತದೆ. ಕಳೆದ ವರ್ಷ ಬ್ಯಾಂಕಿಂಗ್ ಪ್ರೊಂಟಿಯರ್ಸ್, ಮುಂಬಯಿ ಇವರು ನೀಡಿದ ಬೆಸ್ಟ್ ಚೇರ್‍ಮೆನ್ ನ್ಯಾಶನಲ್ ಅವಾರ್ಡ್‍ನ್ನು ಇವರು ಪಡೆದಿರುತ್ತಾರೆ.

ಲಂಡನಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತ ಸರಕಾರದ ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್.ಡಿ.ದೇವೇಗೌಡ, ಯುನೈಟೆಡ್ ಕಿಂಗ್‍ಡಮ್‍ನ ಪಾರ್ಲಿಮೆಂಟ್ ಸದಸ್ಯರುಗಳಾದ ಶ್ರೀ ವೀರೇಂದ್ರ ಶರ್ಮಾ, ಕುಮಾರಿ ಪ್ರೀತಿ ಗಿಲ್, ಯುನೈಟೆಡ್ ಕಿಂಗ್‍ಡಮ್‍ನ ಮೇಯರ್ ಹರ್ಷದ್ ಮೊಹಮ್ಮದ್ ಹಾಗೂ ಎನ್‍ಆರ್‍ಐ ವೆಲ್‍ಫೇರ್ ಸೊಸೈಟಿ ಆಫ್ ಇಂಡಿಯಾ, ನವದೆಹಲಿ ಇದರ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಎಸ್‍ಸಿಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿದ ದೇಶದ ವಿವಿಧ ರಾಜ್ಯಗಳ ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು ಹಾಗೂ ನಿರ್ದೇಶಕರುಗಳ ಅಧ್ಯಯನ

ತಂಡದ ವತಿಯಿಂದ ಬೆಸ್ಟ್ ಚೇರ್‍ಮೆನ್ ಅವಾರ್ಡ್ ಪಡೆದ ಡಾ|| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.


ಎಸ್‍ಸಿಡಿಸಿಸಿ ಬ್ಯಾಂಕ್ ನೌಕರರ ಒಕ್ಕೂಟದಿಂದ ಡಾ|ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ


ಎಸ್‍ಸಿಡಿಸಿಸಿ ಬ್ಯಾಂಕ್ ವತಿಯಿಂದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ


ಎಸ್‍ಸಿಡಿಸಿಸಿ ಬ್ಯಾಂಕಿಗೆ 18ನೇ ಬಾರಿಯ ನಬಾರ್ಡ್ ರಾಜ್ಯ ಪ್ರಶಸ್ತಿ ಪ್ರದಾನ


 

ಎಸ್‍ಸಿಡಿಸಿಸಿ ಬ್ಯಾಂಕಿನ ‘ಮೊಬೈಲ್ ಬ್ಯಾಂಕ್’ ಬಗ್ಗೆ
ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಮೆಚ್ಚುಗೆ
******

ಮಂಗಳೂರು* ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೊದಲ ಬಾರಿ ಮೊಬೈಲ್ ಬ್ಯಾಂಕ್‍ನ್ನು ಪರಿಚಯಿಸಿದ ಹೆಗ್ಗಳಿಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‍ಸಿಡಿಸಿಸಿ ಬ್ಯಾಂಕ್)ನದ್ದು, ಇಂತಹ ನೂತನ ಆವಿಷ್ಕಾರವಾಗಿ ಕಾರ್ಯರೂಪಕ್ಕೆ ಬಂದಿರುª ಈ ಮೊಬೈಲ್ ಬ್ಯಾಂಕ್‍ನ್ನು ಕೇಂದ್ರ ಸರಕಾರದ ವಿತ್ತ ಸಚಿವರಾದ (ಕಾರ್ಪೋರೇಟ್ ವ್ಯವಹಾರ) ಶ್ರೀ ಅರ್ಜುನ್ ರಾಮ್ ಮೇಘವಾಲ್ ಅವರು ವೀಕ್ಷಣೆಗೈದÀು ಮೆಚ್ಚುಗೆ ವ್ಯಕ್ತ ಪಡಿಸಿದರು.
2007ರಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಮೊಬೈಲ್ ಬ್ಯಾಂಕ್ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದೆ. ಕೇಂದ್ರ ಸರಕಾರದ ಡಿಜಿಟಲ್ ಇಂಡಿಯಾದ ಆಶ್ರಯವನ್ನು ಈ ಮೊಬೈಲ್ ಬ್ಯಾಂಕ್ ಪೂರೈಸುತ್ತಿದೆ. ಈ ಮೊಬೈಲ್ ಬ್ಯಾಂಕಿನಲ್ಲಿ ಒಂದು ಶಾಖೆಯು ನಿರ್ವಹಿಸುವ ಎಲ್ಲಾ ವಿಭಾಗಗಳಿವೆ ಜೊತೆಗೆ ಎಟಿಎಂ ಸೌಲಭ್ಯವು ಇರುವುದನ್ನು ಸಚಿವರಿಗೆ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್‍ರವರು ವಿವರಿಸಿದರು.
ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಭಾರತ ಸರಕಾರದ ವಿನೂತನ ಯೋಜನೆಗಳಾದ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಹಾಗೂ ಸ್ಟಾರ್ಟ್ ಆಪ್ ಮತ್ತು ಸ್ಟ್ಯಾಂಡ್ ಆಪ್ ಕುರಿತು ಮಾಹಿತಿ ಶಿಬಿರ, ಫಲಾನುಭವಿಗಳ ಕಾರ್ಯಗಾರದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕಿನ ‘ಮೊಬೈಲ್ ಬ್ಯಾಂಕ್’ನ್ನು ವೀಕ್ಷಣೆಗೆ ಇರಿಸಲಾಗಿತ್ತು.
ಈ ಸಂದರ್ಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ , ಬ್ಯಾಂಕಿನ ನಿರ್ದೇಶಕರಾದ ಶ್ರೀ ಶಶಿಕುಮಾರ್ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಸತೀಶ್ ಎಸ್, ಬ್ಯಾಂಕಿನ ಮಹಾಪ್ರಬಂಧಕರಾದ ಶ್ರೀ ರವೀಂದ್ರ ಬಿ ಇವರು ಉಪಸ್ಥಿತರಿದ್ದರು.


NABARD AWARD RECIEVED BY BANK


FCBA 2015-AWARD RECIEVED BY BANK


ಎಸ್‍ಸಿಡಿಸಿಸಿ ಬ್ಯಾಂಕಿಗೆ

ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ:

ಸಹಕಾರಿ ಬ್ಯಾಂಕಿಂಗ್ ರಂಗದಲ್ಲಿ 101 ವರ್ಷಗಳ ಸಾರ್ಥಕ ಸೇವೆ ಯನ್ನು ಪೂರೈಸಿ ಜನಸ್ನೇಹಿ ಬ್ಯಾಂಕ್ ಆಗಿ ಗುರುತಿಸಿಕೊಂಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‍ಸಿಡಿಸಿಸಿ ಬ್ಯಾಂಕ್)ಗೆ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಶನಿವಾರ ಬೆಂಗಳೂರುನಲ್ಲಿ ಪ್ರದಾನ ಮಾಡಲಾಯಿತು.

ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ವರ್ಷಂಪ್ರತಿ ನೀಡುತ್ತಿರುವ ರಾಜ್ಯಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೆ,ಎನ್.ರಾಜಣ್ಣ ಅವರಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್ ರಾಜೇಂದ್ರಕುಮಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಜಿ. ಬಾಬು ಬಿಲ್ಲವ ಅವರು ಸ್ವೀಕರಿಸಿದರು.

ಎಸ್‍ಸಿಡಿಸಿಸಿ ಬ್ಯಾಂಕ್ 2013-14ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತದೆ ಮಾತ್ರವಲ್ಲ ಕಳೆದ 17 ವರ್ಷಗಳಿಂದ ನಿರಂತರವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಎಸ್‍ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿದೆ.

ಎಸ್‍ಸಿಡಿಸಿಸಿ ಬ್ಯಾಂಕಿನ 99 ಶಾಖೆಗಳು ಸಂಪೂರ್ಣ ಗಣಕೀಕರಣಗೊಂಡು ಕೋರ್ ಬ್ಯಾಂಕಿಂಗ್ ಹಾಗೂ ಆರ್‍ಟಿಜಿಎಸ್/ನೇಪ್ಟ್ ನಂತಹ ಹೊಸತನದ ಬ್ಯಾಂಕಿಂಗ್ ಸೇವೆಯನ್ನು ತನ್ನ ಗ್ರಾಹಕರಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಶಾಖೆಗಳ ಮೂಲಕ ನೀಡುತ್ತಿದೆ. ಇಂತಹ ವಿನೂತನ ಬ್ಯಾಂಕಿಂಗ್ ಸೇವೆಯನ್ನು ರಾಜ್ಯ ಮಟ್ಟದಲ್ಲೇ ಪರಿಚಯಿಸಿದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎಂಬ ಮನ್ನಣೆಗೂ ಎಸ್‍ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿದೆ.

ಸೇವೆಯನ್ನೇ ದ್ಯೇಯವನ್ನಾಗಿಟ್ಟುಕೊಂಡು ಡಾ| ಎಂ.ಎನ್ ರಾಜೇಂದ್ರ ಕುಮಾರ್‍ರವರ ದಕ್ಷ ಸಾರಥ್ಯದಲ್ಲಿ ಯಶಸ್ಸಿನ ಪಥದಲ್ಲಿ ಎಸ್‍ಸಿಡಿಸಿಸಿ ಬ್ಯಾಂಕ್ ಮುನ್ನಡೆಯನ್ನು ಕಾಣುತ್ತಿದೆ.

ಶನಿವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಪೆಕ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಟಿ.ಎಂ.ಚಂದ್ರಶೇಖರಯ್ಯ, ಮಾಜಿ ಅಧ್ಯಕ್ಷರಾದ ಶ್ರೀ ಡಾ| ಆರ್ ಎಂ.ಮಂಜುನಾಥ ಗೌಡ, ನಿರ್ದೇಶಕರುಗಳಾದ ಡಾ|ಗುರುಪಾದಪ್ಪ ನಾಗಮಾರಪಳ್ಳಿ, ಶ್ರೀ ಹೆಚ್.ವೈ ಮೇಟಿ, ಶ್ರೀ ಶಿವಾನಂದ ಎಸ್ ಪಾಟೀಲ್, ಶ್ರೀ ಆರ್.ನರೇಂದ್ರ, ಶ್ರೀ ಶಿವರಾಮ್ ಮಹಾಬಲೇಶ್ವರ ಹೆಬ್ಬಾರ್, ಶ್ರೀ ಪಟೇಲ್ ಶಿವರಾಮ್, ಶ್ರೀ ಲಕ್ಷ್ಮಣರಾವ್ ಅಜ್ಜಪ್ಪಚಿಂಗಳೆ, ಶ್ರೀ ಜೆ.ಆರ್ ಷಣ್ಮುಖಪ್ಪ, ಶ್ರೀ ಎಂ.ಸಿ ನೀಲಕಂಠೇಗೌಡ, ಶ್ರೀ ಕೆ.ಸಿ.ಜೋಗಿಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಎಸ್.ರಮಣರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.


ನಂ.1 ಸಂಸದರಿಗೆ ಎಸ್‍ಸಿಡಿಸಿಸಿ ಬ್ಯಾಂಕ್‍ನಿಂದ ಅಭಿನಂದನೆ:

ಮಂಗಳೂರು. ಕರ್ನಾಟಕ ರಾಜ್ಯದ ನಂಬರ್ ವನ್ ಸಂಸದರಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲು ಅವರನ್ನು ಶನಿವಾರ ಎಸ್‍ಸಿಡಿಸಿಸಿ ಬ್ಯಾಂಕ್ ವತಿಯಿಂದ ಅಭಿನಂದಿಸಲಾಯಿತು.

ಸಹಕಾರ ಕ್ಷೇತ್ರದ ಬಗ್ಗೆ ವಿಶೇಷ ಅಭಿಮಾನವನ್ನಿಟ್ಟುಕೊಂಡಿರುವ ನಳಿನ್ ಕುಮಾರ್ ಕಟೀಲು ಅವರನ್ನು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಬ್ಯಾಂಕಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಭಿನಂದಿಸಿದರು.

ಬ್ಯಾಂಕಿನ ನಿರ್ದೇಶಕರಾದ ಶ್ರೀ ಎಂ.ವಾದಿರಾಜ ಶೆಟ್ಟಿ, ಕೋಸ್ಟಲ್ ಕನ್‍ಸ್ಟ್ರಕ್ಷನ್ ಮಾಲಿಕಾರದ ಶ್ರೀ ಮೊಹಮ್ಮದ್ ಅಮೀರ್, ಶ್ರೀ ಸುಧೀರ್ ಹೆಗ್ಡೆ ಬೈಲೂರು, ಜಯಪ್ರಕಾಶ್, ವಕೀಲರಾದ ಶ್ರೀ ದೇವಿಪ್ರಸಾದ್ ಹಾಗೂ ಬ್ಯಾಂಕಿನ ಎಜಿಎಂ ಶ್ರೀ ರವೀಂದ್ರ ಬಿ. ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು


INAGURATION OF KIOSK MACHINE


ಹರ್ಷ ವಾರದ ಅತಿಥಿ
ಡಾ.ಎಂ.ಎನ್ ರಾಜೇಂದ್ರಕುಮಾರ್

ಮಂಗಳೂರು ಆಕಾಶವಾಣಿಯ ಹರ್ಷ ವಾರದ ಅತಿಥಿಯ 191ನೇ ಕಾರ್ಯಕ್ರಮದಲ್ಲಿ ಜೂನ್ 14ರಂದು ಬೆಳಿಗ್ಗೆ 8.50ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಭಾಗವಹಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ 1987 ರಿಂದ ನಿರ್ದೇಶಕರಾಗಿ 1994 ರಿಂದ 21 ವರ್ಷಗಳ ಧೀರ್ಘ ಅವಧಿಯಲ್ಲಿ ಅಧ್ಯಕ್ಷರಾಗಿ ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿ ಗೆ ಶ್ರಮಿಸಿದ ಇವರು ಬ್ಯಾಂಕಿನ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ 100 ಶಾಖೆಗಳನ್ನು ತೆರೆದವರು. ಬ್ಯಾಂಕಿನ ಠೇವಣಾತಿ 2568.83 ಕೋಟಿಗಳ 2447 ಕೋಟಿ ರೂ.ಸಾಲ ವಿತರಿಸಿದುದಲ್ಲದೆ 22.73 ಕೋಟಿ ರೂ. ಲಾಭಗಳಿಸಿದೆ. ಉತ್ಕøಷ್ಟ ಸಹಕಾರಿ ಸೌಧದ ಮೂಲಕ ದೇಶದಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿದ ಸಹಕಾರಿ ಕ್ಷೇತ್ರದ ಬ್ಯಾಂಕ್ ಎಂಬ ಕೀರ್ತಿಗೆ ಭಾಜನವಾಗಿದೆ. ನವೋದಯ ಸ್ವಸಹಾಯ ಗುಂಪುಗಳ ಮೂಲಕ ಆರ್ಥಿಕ ಸಾಮಾಜಿಕ ಪ್ರಗತಿಗೆ ನಾಂದಿ ಹಾಡಿದ ರಾಜೇಂದ್ರ ಕುಮಾರ್ ಅವರು ಸಾಂಸ್ಕøತಿಕ ರಂಗಕ್ಕೂ ಕೊಡುಗೆ ಸಲ್ಲಿಸಿದವರು. ತಮ್ಮ ಜೀವನದ ಸಾಧನೆಯ ಹೆಜ್ಜೆಗಳನ್ನು ಸಂದರ್ಶನದಲ್ಲಿ ತಿಳಿಸಿದ್ದಾರೆ.
 
 ಇವರನ್ನು ಕಾರ್ಯಕ್ರಮ ನಿರ್ವಾಹಕರಾದ ಡಾ.ಸದಾನಂದ ಪೆರ್ಲ ಸಂದರ್ಶಿಸಿದ್ದಾರೆ.

 


ಎಸ್‍ಸಿಡಿಸಿಸಿ ಬ್ಯಾಂಕ್ ವತಿಯಿಂದ
ರೈತರಿಗೆ, ಠೇವಣಿದಾರರಿಗೆ
“ಪ್ರಧಾನಮಂತ್ರಿ ಸುರಕ್ಷಾ ಬಿಮಾ” ವಿಮಾ ಯೋಜನೆ

ಮಂಗಳೂರು* ಕೇಂದ್ರ ಸರಕಾರದ ಸಾಮಾಜಿಕ ಭದ್ರತೆಯ ಯೋಜನೆಯಂತೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ವಿಮಾ ಯೋಜನೆಯನ್ನು ಎಸ್‍ಸಿಡಿಸಿಸಿ ಬ್ಯಾಂಕ್ ಜ್ಯಾರಿಗೆ ತಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಂದ ಅಲ್ಪಾವಧಿ ಕೃಷಿ ಬೆಳೆ ಸಾಲವನ್ನು ರುಪೇ ಕಿಸಾನ್ ಕಾರ್ಡ್ ವತಿಯಿಂದ ಪಡೆಯುವ ಎಲ್ಲಾ ರೈತರಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ವಿಮಾ ಯೋಜನೆಯ ವಿಮಾ ಮೊತ್ತವನ್ನು ಎಸ್‍ಸಿಡಿಸಿಸಿ ಬ್ಯಾಂಕಿನಿಂದ ಪಾವತಿಸಲಾಗುವುದು.

ಠೇವಣಿದಾರರಿಗೂ ವಿಮೆ: ಎಸ್‍ಸಿಡಿಸಿಸಿ ಬ್ಯಾಂಕಿನಲ್ಲಿ ರೂ.1.00 ಲಕ್ಷಕ್ಕಿಂತ ಮೇಲ್ಪಟ್ಟ ಠೇವಣಿಯನ್ನು ಹೊಂದಿದ ಎಲ್ಲಾ ಠೇವಣಿದಾರರಿಗೂ ಪ್ರಧಾನಮಂತ್ರಿ ಸುರಕ್ಷಾ ಬಿಮಾ ವಿಮಾ ಯೋಜನೆಯನ್ನು ಅಳವಡಿಸಿ ಅವರ ಪ್ರೀಮಿಯಮ್ ಮೊತ್ತವನ್ನು ಕೂಡಾ ಬ್ಯಾಂಕ್ ಭರಿಸುತ್ತದೆ.
ಈ ವಿಮಾ ಯೋಜನೆಯಲ್ಲಿ ರೂ.2.00 ಲಕ್ಷ ಪರಿಹಾರ ನೀಡುವ ಅಪಘಾತ ವಿಮೆಯಾಗಿದ್ದು 18ರಿಂದ 70 ವರ್ಷ ವಯಸ್ಸಿನವರು ಅರ್ಹರು. ಅಪಘಾತದಲ್ಲಿ ಮೃತ ಪಟ್ಟರೆ ಅವರ ವಾರೀಸುದಾರರಿಗೆ ರೂ.2.00ಲಕ್ಷ ವಿಮೆ ದೊರೆಯುತ್ತದೆ, ಅಪಘಾತದಲ್ಲಿ ಶಾಶ್ವತ ಅಂಗ ವೈಕಲ್ಯತೆಗೆ ಒಳಗಾದರೆ ರೂ.2.00 ಲಕ್ಷ, ಭಾಗಶ: ಅಂಗವೈಕಲ್ಯತೆಗೆ ಒಳಗಾದರೆ ರೂ.1.00 ಲಕ್ಷ ಪರಿಹಾರ ದೊರೆಯುತ್ತದೆ. ಬ್ಯಾಂಕಿನ ಇತರ ಠೇವಣಿ ಖಾತೆದಾರರಿಗೆ ಕೂಡಾ ಈ ವಿಮಾ ಯೋಜನೆಗೆ ಸೇರಿಕೊಳ್ಳಲು ಅವಕಾಶವಿದೆ ಎಂದು ಡಾ|| ಎಂ.ಎನ್. ರಾಜೇಂದ್ರ ಕುಮಾರ್‍ರವರು ತಿಳಿಸಿದ್ದಾರೆ.


NAFSCOB MANAGING DIRECTOR VISIT TO BANK


SAHAKARA RATNA AWARD


DOCTORATE AWARD


APEX BANK AWARD - 2011


SAHAKARA VISHWA BANDU SHREE AWARD